Numbers 3:41 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಈಗ ಇಸ್ರೇಲಿನ ಚೊಚ್ಚಲು ಗಂಡಸರನ್ನು ತೆಗೆದುಕೊಳ್ಳುವುದಿಲ್ಲ. ಯೆಹೋವನಾದ ನಾನು ಲೇವಿಯರನ್ನು ತೆಗೆದುಕೊಳ್ಳುವೆನು. ಮಾತ್ರವಲ್ಲದೆ ಇಸ್ರೇಲಿನಲ್ಲಿ ಇತರ ಜನರ ಚೊಚ್ಚಲು ಪ್ರಾಣಿಗಳ ಬದಲು, ಲೇವಿಯರ ಎಲ್ಲಾ ಚೊಚ್ಚಲು ಪ್ರಾಣಿಗಳನ್ನು ತೆಗೆದುಕೊಳ್ಳುವೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರಲ್ಲಿರುವ ಚೊಚ್ಚಲಾದವರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲರ ಚೊಚ್ಚಲು ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನೂ ನನಗೋಸ್ಕರ ತೆಗೆದುಕೋ, ನಾನೇ ಯೆಹೋವನು” ಎಂದನು.
Kannada BSI Bible 2016
ಇಸ್ರಾಯೇಲ್‌ ಮಕ್ಕಳಲ್ಲಿರುವ ಚೊಚ್ಚಲಾದವರೆ ಲ್ಲರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲ್‌ ಮಕ್ಕಳ ದನಗಳಲ್ಲಿರುವ ಸಕಲ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ನನಗೋಸ್ಕರ ತೆಗೆದುಕೋ (ನಾನೇ ಕರ್ತನು) ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೆಂಬ ನನ್ನ ಸೊತ್ತಾಗುವದಕ್ಕೆ ನೀನು ಇಸ್ರಾಯೇಲ್ಯರಲ್ಲಿರುವ ಚೊಚ್ಚಲಾದವರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲ್ಯರ ಚೊಚ್ಚಲಾದ ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನೂ ತೆಗೆದುಕೊಳ್ಳಬೇಕು ಎಂದು ಆಜ್ಞಾಪಿಸಿದನು.
Kannada Bible (KNCL) BSI 2016
ಆದರೆ ಸರ್ವೇಶ್ವರನೆಂಬ ನನ್ನ ಸೊತ್ತಾಗುವುದಕ್ಕೆ ನೀನು ಇಸ್ರಯೇಲರ ಚೊಚ್ಚಲಾದ ಪಶುಪ್ರಾಣಿಗಳಿಗೆ ಬದಲಾಗಿ ಲೇವಿಯರ ಪಶುಪ್ರಾಣಿಗಳನ್ನು ತೆಗೆದುಕೋ,” ಎಂದು ಆಜ್ಞಾಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರಲ್ಲಿರುವ ಜೇಷ್ಠರಾದವರೆಲ್ಲರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲರ ಪಶುಗಳಲ್ಲಿರುವ ಸಕಲ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನೂ ನನಗೋಸ್ಕರ ತೆಗೆದುಕೋ, ‘ನಾನೇ ಯೆಹೋವ ದೇವರು,’ ” ಎಂದರು.