Numbers 3:46 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲೇವಿಯರ ಸಂಖ್ಯೆ 22,000. ಆದರೆ ಬೇರೆ ಕುಟುಂಬಗಳ ಚೊಚ್ಚಲು ಪುತ್ರರ ಸಂಖ್ಯೆ 22,273. ಹೀಗೆ ಲೇವಿಯರಿಗಿಂತ 273 ಮಂದಿ ಹೆಚ್ಚು ಚೊಚ್ಚಲು ಪುತ್ರರಿರುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಲೇವಿಯರ ಸಂಖ್ಯೆಗಿಂತ ಹೆಚ್ಚಾಗಿ 273 ಮಂದಿ ಚೊಚ್ಚಲರು ಹೆಚ್ಚಾಗಿ ಇಸ್ರಾಯೇಲರಲ್ಲಿ ಇರುವುದರಿಂದ ಅವರನ್ನು ಬಿಡಿಸುವುದಕ್ಕಾಗಿ ಒಬ್ಬೊಬ್ಬರಿಗೆ ಐದೈದು ಶೆಕೆಲ್ ಮೇರೆಗೆ ಈಡು ತೆಗೆದುಕೊಳ್ಳಬೇಕು.
Kannada BSI Bible 2016
ಇಸ್ರಾಯೇಲ್ ಮಕ್ಕಳ ಚೊಚ್ಚಲಾದವರಲ್ಲಿ ಲೇವಿ ಯರಿಗಿಂತ ಹೆಚ್ಚಾಗಿರುವ ಇನ್ನೂರ ಎಪ್ಪತ್ತಮೂರು ಮಂದಿಯ ವಿಮೋಚನೆಯ ಕ್ರಯವಾಗಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಯರ ಸಂಖ್ಯೆಗಿಂತ ಹೆಚ್ಚಾಗಿ 273 ಮಂದಿ ಚೊಚ್ಚಲರು ಇಸ್ರಾಯೇಲ್ಯರಲ್ಲಿ ಇರುವದರಿಂದ ಅವರನ್ನು ಬಿಡಿಸುವದಕ್ಕೋಸ್ಕರ ತಲೆ ಒಂದಕ್ಕೆ ಐದೈದು ರೂಪಾಯಿಯ ಮೇರೆಗೆ ಈಡು ತೆಗೆದುಕೊಳ್ಳಬೇಕು.
Kannada Bible (KNCL) BSI 2016
ಲೇವಿಯರ ಸಂಖ್ಯೆಗಿಂತ 273 ಮಂದಿ ಜೇಷ್ಠರು ಇಸ್ರಯೇಲರಲ್ಲಿ ಹೆಚ್ಚಾಗಿದ್ದಾರೆ. ಆದುದರಿಂದ ಅವರನ್ನು ವಿಮೋಚಿಸುವುದಕ್ಕಾಗಿ ತಲೆ ಒಂದಕ್ಕೆ ಐದು ಬೆಳ್ಳಿ ನಾಣ್ಯಗಳಂತೆ ಈಡು ತೆಗೆದುಕೊ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರ ಜೇಷ್ಠರಾದವರಲ್ಲಿ ಲೇವಿಯರಿಗಿಂತ ಹೆಚ್ಚಾಗಿರುವ 273 ಮಂದಿಯ ವಿಮೋಚನೆಯ ಕ್ರಯವಾಗಿ