Numbers 30:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಗಂಡನು ಅವುಗಳನ್ನು ತಿಳಿದಾಗಲೇ ರದ್ದುಗೊಳಿಸಿದರೆ, ಅವಳ ಎಲ್ಲ ಹರಕೆಗಳಿಗೆ ಮತ್ತು ಆಣೆಗಳಿಗೆ ಬೆಲೆಯಿರುವುದಿಲ್ಲ. ಯಾಕೆಂದರೆ ಗಂಡನು ಅವುಗಳನ್ನು ರದ್ದುಪಡಿಸಿದನು. ಆದ್ದರಿಂದ ಯೆಹೋವನು ಆಕೆಯನ್ನು ಕ್ಷಮಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಗಂಡನು ಅವುಗಳನ್ನು ತಿಳಿದಾಗಲೇ ಬೇಡವೆಂದರೆ ಅವು ರದ್ದಾಗುವವು. ಗಂಡನು ಕ್ಷಮಿಸಿ ಬೇಡವೆಂದು ಹೇಳಿದ್ದರಿಂದ ಅಂಥವಳು ಯೆಹೋವನಿಗೆ ಹರಕೆ ಮಾಡಿದರೂ, ದೋಷಿಯೆಂದು ಎಣಿಸಲ್ಪಡುವುದಿಲ್ಲ.
Kannada BSI Bible 2016
ಆದರೆ ಅವಳ ಗಂಡನು ಅವುಗಳನ್ನು ಕೇಳಿದ ದಿವಸದಲ್ಲೇ ಅವುಗಳನ್ನು ಪೂರ್ಣವಾಗಿ ನಿರರ್ಥಕಮಾಡಿದ ಪಕ್ಷ ದಲ್ಲಿ ಅವಳ ಪ್ರಮಾಣಗಳಿಗೋಸ್ಕರವೂ ಅವಳ ಪ್ರಾಣದ ಕಟ್ಟಳೆಗೋಸ್ಕರವೂ ಅವಳ ತುಟಿಗಳಿಂದ ಹೊರಟದ್ದು ಯಾವದಾಗಲಿ ನಿಲ್ಲದು, ಅವಳ ಗಂಡನು ಅವುಗಳನ್ನು ನಿರರ್ಥಕಮಾಡಿದ್ದಾನೆ; ಕರ್ತನು ಅವಳನ್ನು ಕ್ಷಮಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಗಂಡನು ಅವುಗಳನ್ನು ತಿಳಿದಾಗಲೇ ಬೇಡವೆಂದರೆ ಅವು ರದ್ದಾಗುವವು. ಗಂಡನು ರದ್ದುಮಾಡಿದ್ದರಿಂದ ಅಂಥವಳು ಯೆಹೋವನಿಂದ ದೋಷಿಯೆಂದು ಎಣಿಸಲ್ಪಡುವದಿಲ್ಲ.
Kannada Bible (KNCL) BSI 2016
ಆದರೆ ಗಂಡನು ಅವುಗಳನ್ನು ತಿಳಿದಾಗಲೇ ಬೇಡವೆಂದರೆ ಅವು ರದ್ದಾಗುತ್ತವೆ. ಗಂಡನು ರದ್ದುಮಾಡಿದ್ದರಿಂದ ಸರ್ವೇಶ್ವರ ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವಳ ಗಂಡನು ಅವುಗಳನ್ನು ಕೇಳಿದ ದಿವಸದಲ್ಲೇ ಅವುಗಳನ್ನು ಪೂರ್ಣವಾಗಿ ನಿರರ್ಥಕ ಮಾಡಿದ ಪಕ್ಷದಲ್ಲಿ ಅವಳ ಹರಕೆಗಳಿಗೋಸ್ಕರವೂ ಅವಳು ಕೈಗೊಂಡ ಕಟ್ಟಳೆಗೋಸ್ಕರವೂ ಅವಳ ತುಟಿಗಳಿಂದ ಹೊರಟದ್ದು ಯಾವುದಾಗಲಿ ನಿಲ್ಲದು. ಅವಳ ಗಂಡನು ಅವುಗಳನ್ನು ನಿರರ್ಥಕ ಮಾಡಿದ್ದಾನೆ. ಯೆಹೋವ ದೇವರು ಅವಳಿಗೆ ಕ್ಷಮಿಸುವರು.