Numbers 30:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೆಂಡತಿ ಮಾಡಿದ ಹರಕೆಯನ್ನೂ ಆಣೆಯನ್ನೂ ಸ್ಥಿರಪಡಿಸುವುದಕ್ಕಾಗಲಿ ರದ್ದುಪಡಿಸುವುದಕ್ಕಾಗಲಿ ಗಂಡನಿಗೆ ಅಧಿಕಾರವಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆಂಡತಿ ಮಾಡಿದ ಹರಕೆಯನ್ನೂ, ಉಪವಾಸವಾಗಿರುವೆನೆಂದು ಅವಳು ಮಾಡಿದ ಪ್ರಮಾಣವನ್ನೂ ಸ್ಥಾಪಿಸುವುದಕ್ಕಾಗಲಿ ರದ್ದುಮಾಡುವುದಕ್ಕಾಗಲಿ ಗಂಡನಿಗೆ ಅಧಿಕಾರವಿರುವುದು.
Kannada BSI Bible 2016
ಎಲ್ಲಾ ಪ್ರಮಾಣವನ್ನೂ ಪ್ರಾಣವನ್ನು ಕುಂದಿಸುವ ಕಟ್ಟಳೆಯ ಎಲ್ಲಾ ಆಣೆಗಳನ್ನೂ ಅವಳ ಗಂಡನು ಸಾರ್ಥಕಮಾಡಬಹುದು, ಇಲ್ಲವೆ ನಿರರ್ಥಕ ಮಾಡಬಹುದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಂಡತಿ ಮಾಡಿದ ಹರಕೆಯನ್ನೂ ಉಪವಾಸವಾಗಿರುವೆನೆಂದು ಅವಳು ಮಾಡಿದ ಪ್ರಮಾಣವನ್ನೂ ಸ್ಥಾಪಿಸುವದಕ್ಕಾಗಲಿ ರದ್ದು ಮಾಡುವದಕ್ಕಾಗಲಿ ಗಂಡನಿಗೆ ಅಧಿಕಾರವಿರುವದು.
Kannada Bible (KNCL) BSI 2016
ಹೆಂಡತಿ ಮಾಡಿದ ಹರಕೆಯನ್ನು ಹಾಗು ಉಪವಾಸವಿರುವೆನೆಂದು ಅವಳು ಮಾಡಿದ ಪ್ರಮಾಣವನ್ನು ದೃಢೀಕರಿಸುವುದಕ್ಕಾಗಲಿ, ರದ್ದುಪಡಿಸುವುದಕ್ಕಾಗಲಿ ಗಂಡನಿಗೆ ಹಕ್ಕಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮಸ್ತ ಪ್ರಮಾಣವನ್ನೂ ಪ್ರಾಣವನ್ನು ಕುಂದಿಸುವ ಸಮಸ್ತ ಹರಕೆಗಳನ್ನೂ, ಅವಳ ಗಂಡನು ಅದನ್ನು ಸ್ಥಾಪಿಸಬಹುದು ಅಥವಾ ಅದನ್ನು ರದ್ದುಗೊಳಿಸಬಹುದು.