Numbers 30:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಅವಳ ಗಂಡನು ಅದನ್ನು ಕೇಳಿದ ದಿನದಿಂದ ಅದರ ಬಗ್ಗೆ ಆಕ್ಷೇಪಿಸದಿದ್ದರೆ, ಅವನು ಅವಳ ಎಲ್ಲಾ ಹರಕೆಗಳನ್ನು ಮತ್ತು ಆಣೆಗಳನ್ನು ಸ್ಥಿರಪಡಿಸಿದ್ದಾನೆ. ಯಾಕೆಂದರೆ ಅವನು ಅದರ ಬಗ್ಗೆ ಕೇಳಿದ ದಿನದಂದು ಅವಳಿಗೆ ಏನೂ ಹೇಳಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವಳ ಗಂಡನು ಯಾವ ಅಡ್ಡಿಯನ್ನೂ ಮಾಡದೆ ಸುಮ್ಮನಿದ್ದರೆ ಅವನು ಅವಳ ಹರಕೆಗಳನ್ನೂ, ಪ್ರತಿಜ್ಞೆಗಳನ್ನೂ ಅವನು ನಮೂದಿಸಿದಂತೆ ಆಗುವುದು.
Kannada BSI Bible 2016
ಆದರೆ ಅವಳ ಗಂಡನು ಅದಕ್ಕೆ ದಿನದಿನಕ್ಕೆ ಪೂರ್ಣವಾಗಿ ಸುಮ್ಮನಿದ್ದರೆ ಅವನು ಅವಳ ಸಮಸ್ತ ಪ್ರಮಾಣಗಳನ್ನೂ ಅವಳ ಮೇಲಿರುವ ಸಮಸ್ತ ಕಟ್ಟಳೆಗಳನ್ನೂ ಸ್ಥಾಪಿಸುತ್ತಾನೆ; ಅವನು ಕೇಳಿದ ದಿವಸ ದಲ್ಲಿ ಅವಳಿಗೆ ಸುಮ್ಮನಿರುವದರಿಂದ ಅವುಗಳನ್ನು ಸ್ಥಾಪಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವಳ ಗಂಡನು ಯಾವ ಅಡ್ಡಿಯನ್ನೂ ಮಾಡದೆ ದಿನದಿನಕ್ಕೆ ಸುಮ್ಮನಿದ್ದರೆ ಅವನು ಅವಳ ಹರಕೆಗಳನ್ನೂ ಪ್ರತಿಜ್ಞೆಗಳನ್ನೂ ಸ್ಥಾಪಿಸಿದ ಹಾಗಾಗುವದು.
Kannada Bible (KNCL) BSI 2016
ಆದರೆ ಅವಳ ಗಂಡ ಯಾವ ಅಡ್ಡಿಯನ್ನೂ ಮಾಡದೆ ದಿನದಿನಕ್ಕೂ ಸುಮ್ಮನಿದ್ದರೆ ಅವಳ ಹರಕೆಗಳನ್ನೂ ಅವನು ಅನುಮೋದಿಸಿದಂತಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವಳ ಗಂಡನು ಅದಕ್ಕೆ ದಿನದಿನಕ್ಕೆ ಪೂರ್ಣವಾಗಿ ಸುಮ್ಮನಿದ್ದರೆ, ಅವನು ಅವಳ ಸಮಸ್ತ ಹರಕೆಗಳನ್ನೂ ಅವಳ ಮೇಲಿರುವ ಸಮಸ್ತ ಪ್ರತಿಜ್ಞೆಗಳನ್ನೂ ಅನುಮೋದಿಸಿದಂತಾಗುವುದು. ಅವನು ಕೇಳಿದ ದಿನದಲ್ಲಿ ಅದಕ್ಕೆ ಸುಮ್ಮನಿರುವುದರಿಂದ ಅವುಗಳನ್ನು ಸ್ಥಾಪಿಸಿದ್ದಾನೆ.