Numbers 30:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗಂಡಹೆಂಡತಿಯರ ಬಗ್ಗೆ ಮತ್ತು ತಂದೆಯೊಡನೆ ಇನ್ನೂ ಮನೆಯಲ್ಲಿರುವ ಮಗಳ ವಿಷಯದಲ್ಲಿ ಯೆಹೋವನು ಮೋಶೆಗೆ ಈ ಆಜ್ಞೆಗಳನ್ನು ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಂಡಹೆಂಡತಿಯರ ವಿಷಯವಾಗಿಯೂ, ಇನ್ನೂ ಮದುವೆಯಿಲ್ಲದ ಹೆಂಗಸು ಮತ್ತು ಅವಳ ತಂದೆ ಇವರ ವಿಷಯವಾಗಿಯೂ, ಹರಕೆಗಳ ಸಂಬಂಧವಾಗಿಯೂ ಯೆಹೋವನು ಮೋಶೆಗೆ ಕೊಟ್ಟ ನಿಯಮಗಳು ಇವೇ.
Kannada BSI Bible 2016
ಪತಿಪತ್ನಿಯರ ವಿಷಯದಲ್ಲಿಯೂ ತಂದೆಯೂ ತಂದೆ ಮನೆಯಲ್ಲಿ ಕನ್ಯಾವಸ್ತೆಯಾಗಿರುವ ಮಗಳೂ ಇವರ ವಿಷಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಕಟ್ಟಳೆಗಳು ಇವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಂಡಹೆಂಡತಿಯರ ವಿಷಯವಾಗಿಯೂ ಇನ್ನೂ ಮದುವೆಯಿಲ್ಲದ ಹೆಂಗಸು ಮತ್ತು ಅವಳ ತಂದೆ ಇವರ ವಿಷಯವಾಗಿಯೂ [ಹರಕೆಗಳ ಸಂಬಂಧದಲ್ಲಿ] ಯೆಹೋವನು ಮೋಶೆಗೆ ಕೊಟ್ಟ ನಿಯಮಗಳು ಇವೇ.
Kannada Bible (KNCL) BSI 2016
ಇವೇ ಗಂಡಹೆಂಡಿರ ವಿಷಯವಾಗಿ ಹಾಗು ಇನ್ನೂ ಮದುವೆಯಿಲ್ಲದ ಪುತ್ರಿ ಮತ್ತು ಅವಳ ತಂದೆಯ ವಿಷಯವಾಗಿ ಸರ್ವೇಶ್ವರ ಸ್ವಾಮಿ ಕೊಟ್ಟ ನಿಯಮಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಂಡ ಹೆಂಡತಿಯರ ವಿಷಯದಲ್ಲಿಯೂ ತಂದೆಯ ಮನೆಯಲ್ಲಿ ಕನ್ಯಾವಸ್ಥೆಯಲ್ಲಿರುವ ಮಗಳ ವಿಷಯದಲ್ಲಿಯೂ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಕಟ್ಟಳೆಗಳು ಇವೇ.