Numbers 30:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ತಂದೆಯು ಆ ಸಂಗತಿಯನ್ನು ತಿಳಿದ ದಿನವೇ ಅದನ್ನು ಆಕ್ಷೇಪಿಸಿದರೆ, ಆಕೆಯು ಮಾಡಿದ ಹರಕೆಯನ್ನಾಗಲಿ ಇಟ್ಟುಕೊಂಡ ಆಣೆಯನ್ನಾಗಲಿ ನೆರವೇರಿಸಬೇಕಿಲ್ಲ. ತಂದೆಯು ಆಕ್ಷೇಪಿಸಿದ್ದರಿಂದ ಯೆಹೋವನು ಅವಳನ್ನು ಕ್ಷಮಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ತಂದೆ ಆ ಸಂಗತಿಯನ್ನು ತಿಳಿದಾಗ ಹಾಗೆ ಮಾಡಬಾರದೆಂದು ಅಪ್ಪಣೆಕೊಟ್ಟರೆ ಅವಳು ಮಾಡಿದ ಹರಕೆಗಳೂ, ಪ್ರತಿಜ್ಞೆಗಳೂ ವ್ಯರ್ಥವಾಗುವವು. ತಂದೆ ಕ್ಷಮಿಸಿ ಬೇಡವೆಂದು ಹೇಳಿದ್ದರಿಂದ ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.
Kannada BSI Bible 2016
ಆದರೆ ಅವಳ ತಂದೆ ಕೇಳಿದ ದಿವಸದಲ್ಲಿ ಅವಳನ್ನು ತಡೆದರೆ ಅವಳ ಎಲ್ಲಾ ಪ್ರಮಾಣಗಳೂ ಅವಳು ತನ್ನ ಪ್ರಾಣದ ಮೇಲೆ ಇಟ್ಟುಕೊಂಡ ಎಲ್ಲಾ ಬಂಧನಗಳೂ ನಿಲ್ಲವು; ಅವಳ ತಂದೆ ಅವಳಿಗೆ ತಡೆದ ಕಾರಣ ಕರ್ತನು ಅವಳನ್ನು ಕ್ಷಮಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ತಂದೆ ಆ ಸಂಗತಿಯನ್ನು ತಿಳಿದಾಗ ಹಾಗೆ ಮಾಡಬಾರದೆಂದು ಅಪ್ಪಣೆಕೊಟ್ಟರೆ ಅವಳು ಮಾಡಿದ ಹರಕೆಗಳೂ ಪ್ರತಿಜ್ಞೆಗಳೂ ವ್ಯರ್ಥವಾಗುವವು. ತಂದೆ ಬೇಡವೆಂದು ಹೇಳಿದದರಿಂದ ಯೆಹೋವನು ಅವಳನ್ನು ದೋಷಿಯೆಂದು ಎಣಿಸುವದಿಲ್ಲ.
Kannada Bible (KNCL) BSI 2016
ಆದರೆ ಅವಳ ತಂದೆ ಆ ಸಂಗತಿಯನ್ನು ತಿಳಿದು ಹಾಗೆ ಮಾಡಬಾರದೆಂದು ಆಜ್ಞೆ ಮಾಡಿದರೆ ಅವಳು ಮಾಡಿದ ಹರಕೆ ಹಾಗೂ ಪ್ರತಿಜ್ಞೆಗಳು ವ್ಯರ್ಥವಾಗುತ್ತವೆ. ತಂದೆ ಬೇಡವೆಂದು ಹೇಳಿದ್ದರಿಂದ ಸರ್ವೇಶ್ವರ ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವಳ ತಂದೆ ಅದನ್ನು ಕೇಳಿ ಅವಳನ್ನು ತಡೆದರೆ, ಅವಳ ಎಲ್ಲಾ ಹರಕೆಗಳೂ ಪ್ರತಿಜ್ಞೆಗಳೂ ವ್ಯರ್ಥವಾಗುತ್ತವೆ. ಅವಳ ತಂದೆ ಅವಳನ್ನು ತಡೆದ ಕಾರಣ ಯೆಹೋವ ದೇವರು ಅವಳನ್ನು ಕ್ಷಮಿಸುವರು.