Numbers 30:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಗಂಡನು ಅದನ್ನು ಕೇಳಿದ ದಿನವೇ ಆಕ್ಷೇಪಿಸಿದರೆ, ಆಕೆಯು ಮಾಡಿದ ಹರಕೆಯನ್ನಾಗಲಿ ಆಣೆಯನ್ನಾಗಲಿ ನೆರವೇರಿಸಬೇಕಿಲ್ಲ. ಯೆಹೋವನು ಅವಳನ್ನು ಕ್ಷಮಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಗಂಡನು ಕೇಳಿದಾಗಲೇ ಕ್ಷಮಿಸಿ ಬೇಡವೆಂದು ಅಪ್ಪಣೆಕೊಟ್ಟರೆ ಆ ಹರಕೆಯು ಇಲ್ಲವೆ ಆ ಪ್ರತಿಜ್ಞೆಯು ನಿರರ್ಥಕವಾಗುವವು. ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.
Kannada BSI Bible 2016
ಆದರೆ ಅವಳ ಗಂಡನು ಅದನ್ನು ಕೇಳಿದ ದಿವಸದಲ್ಲಿ ಅವಳನ್ನು ತಡೆದು ಅವಳ ಮೇಲೆ ಇರುವ ಅವಳ ಪ್ರಮಾಣವನ್ನೂ ಪ್ರಾಣದ ಮೇಲೆ ಅವಳು ಬಂಧಿಸಿ ಕೊಂಡ ಬಾಯಿಂದ ಬಂದ ಮಾತನ್ನೂ ನಿರರ್ಥಕ ಮಾಡಿದ ಪಕ್ಷದಲ್ಲಿ ಕರ್ತನು ಅವಳಿಗೆ ಕ್ಷಮಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಗಂಡನು ಕೇಳಿದಾಗಲೇ ಬೇಡವೆಂದು ಅಪ್ಪಣೆಕೊಟ್ಟರೆ ಆ ಹರಕೆಯು ಇಲ್ಲವೆ ಅವಿಚಾರ ಪ್ರತಿಜ್ಞೆಯು ನಿರರ್ಥಕವಾಗುವವು. ಯೆಹೋವನು ಅವಳನ್ನು ದೋಷಿಯೆಂದು ಎಣಿಸುವದಿಲ್ಲ.
Kannada Bible (KNCL) BSI 2016
ಆದರೆ ಗಂಡನು, ಕೇಳಿದಾಗಲೆ ಬೇಡವೆಂದು ಆಜ್ಞೆ ಮಾಡಿದರೆ ಆ ಹರಕೆ ಇಲ್ಲವೆ ಆ ಅವಿಚಾರ ಪ್ರತಿಜ್ಞೆ ನಿರರ್ಥಕವಾಗುತ್ತವೆ. ಸರ್ವೇಶ್ವರ ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವಳ ಗಂಡನು ಅದನ್ನು ಕೇಳಿದಾಗ ಬೇಡವೆಂದು ತಡೆದು, ಅವಳ ಮೇಲೆ ಇರುವ ಅವಳ ಹರಕೆಯನ್ನೂ ಇಲ್ಲವೆ ಯೋಚಿಸದೆ ಮಾಡಿದ ಪ್ರತಿಜ್ಞೆಯನ್ನೂ ನಿರರ್ಥಕ ಮಾಡಿದ ಪಕ್ಷದಲ್ಲಿ ಯೆಹೋವ ದೇವರು ಅವಳಿಗೆ ಕ್ಷಮಿಸುವರು.