Numbers 31:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಿಳಾಮನ ಸಲಹೆಯನ್ನು ಅನುಸರಿಸಿ, ಯೆಹೋವನಿಗೆ ವಿರೋಧವಾಗಿ ಇಸ್ರೇಲರು ಪಾಪಮಾಡುವಂತೆ ಮಾಡಿ ಪೆಗೋರದ ಬಾಳನ ಸಂಗತಿಗೆ ಕಾರಣರಾದವರು ಇವರೇ ಅಲ್ಲವೇ? ಅದರ ಫಲವಾಗಿ ಭಯಂಕರವಾದ ಕಾಯಿಲೆಯು ಜನರಿಗೆ ಬಂದಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೆಗೋರದ ಬಾಳನ ಸಂಗತಿಯಲ್ಲಿ ಬಿಳಾಮನ ಆಲೋಚನೆಯನ್ನು ಅನುಸರಿಸಿ ಇಸ್ರಾಯೇಲರನ್ನು ಯೆಹೋವನಿಗೆ ದ್ರೋಹಿಗಳನ್ನಾಗಿ ಮಾಡಿ ಸಮೂಹದವರಲ್ಲಿ ಘೋರವ್ಯಾಧಿ ಉಂಟಾಗುವಂತೆ ಮಾಡಿದವರು ಇವರೇ ಅಲ್ಲವೇ.
Kannada BSI Bible 2016
ಇಗೋ, ಇವರೇ ಬಿಳಾಮನ ಮಾತಿನಿಂದ ಪೆಗೋರನ ಕಾರ್ಯದಲ್ಲಿ ಕರ್ತನಿಗೆ ವಿರೋಧವಾಗಿ ದ್ರೋಹ ಮಾಡುವದಕ್ಕೆ ಇಸ್ರಾ ಯೇಲ್ ಮಕ್ಕಳಿಗೆ ಕಾರಣವಾಗಿದ್ದರು. ಕರ್ತನ ಸಭೆ ಯೊಳಗೆ ಇವರಿಂದಲೇ ವ್ಯಾಧಿಯಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೆಗೋರದ ಬಾಳನ ಸಂಗತಿಯಲ್ಲಿ ಬಿಳಾಮನ ಆಲೋಚನೆಯನ್ನು ಅನುಸರಿಸಿ ಇಸ್ರಾಯೇಲ್ಯರನ್ನು ಯೆಹೋವನಿಗೆ ದ್ರೋಹಿಗಳನ್ನಾಗಿ ಮಾಡಿ ಸಮೂಹದವರಲ್ಲಿ ಘೋರವ್ಯಾಧಿಯುಂಟಾಗುವಂತೆ ಮಾಡಿದವರು ಇವರೇ ಅಲ್ಲವೇ.
Kannada Bible (KNCL) BSI 2016
ಪೆಗೋರದ ಬಾಳನ ವಿಷಯದಲ್ಲಿ ಬಿಳಾಮನ ದುರಾಲೋಚನೆಯನ್ನು ಅನುಸರಿಸಿ, ಇಸ್ರಯೇಲರನ್ನು ಸರ್ವೇಶ್ವರನಿಗೆ ದ್ರೋಹಿಗಳನ್ನಾಗಿಸಿ, ಸಮಾಜದವರಲ್ಲಿ ಘೋರ ವ್ಯಾಧಿಯುಂಟಾಗುವಂತೆ ಮಾಡಿದವರು ಅವರೇ ಅಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರೇ ಬಿಳಾಮನ ಮಾತಿನಿಂದ ಪೆಯೋರನ ಕಾರ್ಯದಲ್ಲಿ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡುವುದಕ್ಕೆ ಇಸ್ರಾಯೇಲರಿಗೆ ಕಾರಣವಾಗಿದ್ದರು. ಯೆಹೋವ ದೇವರ ಸಭೆಯೊಳಗೆ ಇವರಿಂದಲೇ ವ್ಯಾಧಿಯಾಯಿತು.