Numbers 31:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವಾದರೋ ಏಳು ದಿನಗಳವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯರನ್ನು ಕೊಂದವರೂ ಶವಸೋಂಕಿದವರೂ ನಿಮ್ಮವರಾಗಿರಲಿ ಸೆರೆಯವರಾಗಿರಲಿ ಮೂರನೆಯ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಶುದ್ಧೀಕರಿಸಿಕೊಳ್ಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವಾದರೋ ಏಳು ದಿನದವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯ ಪ್ರಾಣತೆಗೆದವರೂ, ಶವಸೋಂಕಿದವರೂ, ನಿಮ್ಮವರಾದರೂ, ಸೆರೆಯವರಾದರೂ ಮೂರನೆಯ ಮತ್ತು ಏಳನೆಯ ದಿನಗಳಲ್ಲಿ ದೋಷಪರಿಹಾರ ಮಾಡಿಕೊಳ್ಳಬೇಕು.
Kannada BSI Bible 2016
ಯಾವನಾದರೂ ಒಬ್ಬ ವ್ಯಕ್ತಿಯನ್ನು ಕೊಂದವನು, ಸತ್ತವನನ್ನು ಮುಟ್ಟಿದವನು ಏಳು ದಿವಸದ ವರೆಗೆ ಪಾಳೆಯದ ಹೊರಗೆ ಇರಬೇಕು. ಮೂರನೇ ದಿನದಲ್ಲಿ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಮತ್ತು ನಿಮ್ಮ ಸೆರೆಯವರನ್ನು ಶುದ್ಧಿ ಮಾಡಿಕೊಳ್ಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವಾದರೋ ಏಳುದಿನದವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯ ಪ್ರಾಣತೆಗೆದವರೂ ಶವಸೋಂಕಿದವರೂ ನಿಮ್ಮವರಾದರೂ ಸೆರೆಯವರಾದರೂ ಮೂರನೆಯ ಮತ್ತು ಏಳನೆಯ ದಿನಗಳಲ್ಲಿ ದೋಷಪರಿಹಾರ ಮಾಡಿಕೊಳ್ಳಬೇಕು.
Kannada Bible (KNCL) BSI 2016
ನಿಮ್ಮಲ್ಲಿ ಮನುಷ್ಯಪ್ರಾಣ ತೆಗೆದವರು ಹಾಗು ಶವ ಸೋಂಕಿದವರು ಏಳು ದಿನದವರೆಗೆ ಪಾಳೆಯದ ಹೊರಗಡೆ ಇರಬೇಕು. ಮೂರನೆಯ ಮತ್ತು ಏಳನೆಯ ದಿನ ನಿಮ್ಮನ್ನೂ ಸೆರೆಯಾಳುಗಳನ್ನೂ ಶುದ್ಧೀಕರಿಸಿಕೊಳ್ಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇದಲ್ಲದೆ ನಿಮ್ಮಲ್ಲಿ ಪ್ರಾಣ ತೆಗೆದವರು ಮತ್ತು ಶವವನ್ನು ಮುಟ್ಟಿದವರು ಏಳು ದಿವಸ ಪಾಳೆಯದ ಹೊರಗೆ ಇರಬೇಕು. ನೀವೂ, ನಿಮ್ಮ ಸೆರೆಯವರೂ ಮೂರನೆಯ ಹಾಗೂ ಏಳನೆಯ ದಿವಸಗಳಲ್ಲಿ ನಿಮ್ಮನ್ನು ಶುದ್ಧ ಮಾಡಿಕೊಳ್ಳಬೇಕು.