Numbers 31:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಮೋಶೆ ಇಸ್ರೇಲರಿಗೆ, “ಮಿದ್ಯಾನ್ಯರು ಯೆಹೋವನಿಗೆ ವಿರೋಧವಾಗಿ ಮಾಡಿದ ಕೃತ್ಯಗಳಿಗಾಗಿ ಅವರ ಮೇಲೆ ಆಕ್ರಮಣ ಮಾಡಿ ದಂಡಿಸಲು ನಿಮ್ಮಲ್ಲಿರುವ ಗಂಡಸರಲ್ಲಿ ಕೆಲವರನ್ನು ದಂಡೆಯಾತ್ರೆಗೆ ಆರಿಸಿಕೊಳ್ಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮೋಶೆಯು ಇಸ್ರಾಯೇಲರಿಗೆ, “ನಿಮ್ಮೊಳಗಿಂದ ಕೆಲವರು ಮಿದ್ಯಾನ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಸಿದ್ಧಮಾಡಿಕೊಳ್ಳಬೇಕು. ಯೆಹೋವನ ಪ್ರತಿದಂಡನೆಯನ್ನು ಅವರಿಗೆ ತೀರಿಸಬೇಕು.
Kannada BSI Bible 2016
ಆಗ ಮೋಶೆಯು ಜನರ ಸಂಗಡ ಮಾತ ನಾಡಿ--ನಿಮ್ಮೊಳಗಿಂದ ಮನುಷ್ಯರು ಯುದ್ಧಕ್ಕೆ ಸಿದ್ಧ ಮಾಡಿಕೊಳ್ಳಲಿ; ಅವರು ಮಿದ್ಯಾನ್ಯರಿಗೆ ವಿರೋಧವಾಗಿ ಹೋಗಿ ಕರ್ತನ ಮುಯ್ಯನ್ನು ಅವರಿಗೆ ತೀರಿಸ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಮೋಶೆಯು ಇಸ್ರಾಯೇಲ್ಯರಿಗೆ - ನೀವು ಒಂದೊಂದು ಕುಲದಿಂದ ಸಾವಿರ ಜನರ ಮೇರೆಗೆ ಭಟರನ್ನು ಯುದ್ಧಕ್ಕೆ ಸಿದ್ಧಮಾಡಿಕೊಳ್ಳಬೇಕು;
Kannada Bible (KNCL) BSI 2016
ಆಗ ಮೋಶೆ ಇಸ್ರಯೇಲರಿಗೆ, “ನೀವು ಒಂದೊಂದು ಕುಲದಿಂದ ಸಾವಿರ ಜನರ ಮೇರೆಗೆ ಕಾಲಾಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಳ್ಳಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆಯು ಜನರ ಸಂಗಡ ಮಾತನಾಡಿ, “ನಿಮ್ಮೊಳಗಿಂದ ಜನರು ಯುದ್ಧಕ್ಕೆ ಸಿದ್ಧಮಾಡಿಕೊಳ್ಳಲಿ. ಅವರು ಮಿದ್ಯಾನ್ಯರಿಗೆ ವಿರೋಧವಾಗಿ ಹೋಗಿ, ಯೆಹೋವ ದೇವರ ಪ್ರತೀಕಾರವನ್ನು ಅವರಿಗೆ ತೀರಿಸಬೇಕು.