Numbers 31:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಿಕ್ಕ ಇಸ್ರೇಲರಿಗೆ ಬರುವ ಭಾಗದಿಂದ ಮನುಷ್ಯರನ್ನು, ದನಕರುಗಳನ್ನು, ಕತ್ತೆಗಳನ್ನು, ಕುರಿಗಳನ್ನು ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಳ್ಳಬೇಕು. ಅದನ್ನು ಯೆಹೋವನ ಪವಿತ್ರ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕು” ಎಂದು ಆಜ್ಞಾಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಳಿದ ಇಸ್ರಾಯೇಲರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕು” ಎಂದು ಆಜ್ಞಾಪಿಸಿದನು.
Kannada BSI Bible 2016
ಇಸ್ರಾಯೇಲ್‌ ಮಕ್ಕಳ ಅರ್ಧ ಪಾಲಿ ನಿಂದ ಮನುಷ್ಯರಿಂದಲೂ ಕತ್ತೆಗಳಿಂದಲೂ ಮಂದೆಗ ಳಿಂದಲೂ ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತಕ್ಕೊಂಡು ಅವುಗಳನ್ನು ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಡಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿುಕ್ಕ ಇಸ್ರಾಯೇಲ್ಯರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕೆಂದು ಆಜ್ಞಾಪಿಸಿದನು.
Kannada Bible (KNCL) BSI 2016
ಮಿಕ್ಕ ಇಸ್ರಯೇಲರಿಗೆ ಬರುವ ಭಾಗದಿಂದ ಸೆರೆಯಾಳು, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಸರ್ವೇಶ್ವರನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಿ,” ಎಂದು ಆಜ್ಞಾಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರ ಅರ್ಧ ಪಾಲಿನಿಂದ ಜನರಿಂದಲೂ, ಕತ್ತೆಗಳಿಂದಲೂ, ಮಂದೆಗಳಿಂದಲೂ, ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತೆಗೆದುಕೊಂಡು, ಅವುಗಳನ್ನು ಯೆಹೋವ ದೇವರ ಗುಡಾರವನ್ನು ನಿರ್ವಹಿಸುವ ಲೇವಿಯರಿಗೆ ಕೊಡಬೇಕು,” ಎಂದರು.