Numbers 31:47 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲ್ ಜನರಿಗೆ ದೊರಕಿದ ಅರ್ಧ ಭಾಗದಿಂದ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಮೋಶೆ ಐವತ್ತನೆ ಒಂದು ಭಾಗವನ್ನು ತೆಗೆದುಕೊಂಡು ಯೆಹೋವನ ಪವಿತ್ರಗುಡಾರವನ್ನು ನೋಡಿಕೊಳ್ಳುತ್ತಿದ್ದ ಲೇವಿಯರಿಗೆ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವುಗಳಲ್ಲಿ ಮೋಶೆಯು ಯೆಹೋವನ ಅಪ್ಪಣೆಯ ಪ್ರಕಾರ ಇಸ್ರಾಯೇಲರಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು.
Kannada BSI Bible 2016
ಪಶುಗಳಲ್ಲಿಯೂ ಐವತ್ತರಲ್ಲಿ ಒಂದು ಪಾಲನ್ನು ತಕ್ಕೊಂಡು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವುಗಳಲ್ಲಿ ಮೋಶೆಯು ಯೆಹೋವನ ಅಪ್ಪಣೆಯ ಪ್ರಕಾರ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು.
Kannada Bible (KNCL) BSI 2016
ಇವುಗಳಲ್ಲಿ ಮೋಶೆ ಸರ್ವೇಶ್ವರನ ಅಪ್ಪಣೆಯ ಪ್ರಕಾರ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಸರ್ವೇಶ್ವರನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಇಸ್ರಾಯೇಲರ ಅರ್ಧದಿಂದ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಐವತ್ತರಲ್ಲಿ ಒಂದು ಪಾಲನ್ನು ತೆಗೆದುಕೊಂಡು, ಯೆಹೋವ ದೇವರು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋವ ದೇವರ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು.