Numbers 31:50 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳನ್ನು ಅಂದರೆ ತೋಳ್ಬಳೆ, ಕಡಗ, ಮುದ್ರೆಯುಂಗುರ, ಮುರುವು, ಕಂಠಮಾಲೆ ಮುಂತಾದವುಗಳನ್ನು ನಮ್ಮ ಶುದ್ಧೀಕರಣಕ್ಕಾಗಿ ಯೆಹೋವನಿಗೆ ತಂದಿದ್ದೇವೆ” ಅಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಪ್ರಾಯಶ್ಚಿತ್ತ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳಲ್ಲಿ ತೋಳ್ಬಳೆ, ಕಡಗ, ಮುದ್ರೆಯುಂಗರ, ಮುರುವು, ಕಂಠಮಾಲೆ ಮುಂತಾದವುಗಳನ್ನು ತಂದಿದ್ದೇವೆ” ಎಂದರು.
Kannada BSI Bible 2016
ಆದದರಿಂದ ಕರ್ತನ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ಆಭರಣಗಳಾದ ಸರಗಳನ್ನೂ ಕಡಗಗಳನ್ನೂ ಉಂಗುರಗಳನ್ನೂ ವಾಲೆ ಗಳನ್ನೂ ಪದಕಗಳನ್ನೂ ಕರ್ತನಿಗೆ ಕಾಣಿಕೆಯಾಗಿ ತಂದಿ ದ್ದೇವೆ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳನ್ನು ಅಂದರೆ ತೋಳ್ಬಳೆ, ಕಡಗ, ಮುದ್ರೆಯುಂಗರ, ಮುರುವು, ಕಂಠಮಾಲೆ ಮುಂತಾದವುಗಳನ್ನು ತಂದಿದ್ದೇವೆ ಅಂದರು.
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ನಮ್ಮ ಪ್ರಾಣಗಳನ್ನು ಕಾಪಾಡಿದ್ದಾರೆ. ಅದಕ್ಕೆ ಈಡಾಗಿ ಅವರಿಗೆ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳನ್ನು, ಅಂದರೆ ತೋಳ್ಬಳೆ, ಕಡಗ, ಮುದ್ರೆಯುಂಗುರ, ಮುರುವು, ಕಂಠಮಾಲೆ, ಮುಂತಾದುವುಗಳನ್ನು ತಂದಿದ್ದೇವೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಯೆಹೋವ ದೇವರ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ವಸ್ತುಗಳಾದ ಸರಪಣಿಗಳನ್ನೂ, ಕಡಗಗಳನ್ನೂ, ಉಂಗುರಗಳನ್ನೂ, ವಾಲೆಗಳನ್ನೂ, ಪದಕಗಳನ್ನೂ ಯೆಹೋವ ದೇವರಿಗೆ ಕಾಣಿಕೆಯಾಗಿ ತಂದಿದ್ದೇವೆ,” ಎಂದು ಹೇಳಿದರು.