Numbers 31:51 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಕೊಟ್ಟ ಎಲ್ಲಾ ಚಿನ್ನದ ಒಡವೆಗಳನ್ನು ಮೋಶೆಯು ಮತ್ತು ಯಾಜಕನಾದ ಎಲ್ಲಾಜಾರನು ತೆಗೆದುಕೊಂಡರು. ಅವುಗಳನ್ನು ಕುಶಲತೆಯಿಂದ ತಯಾರಿಸಿದ ಒಡವೆಗಳಾಗಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಕೊಟ್ಟ ಆ ಚಿನ್ನದ ಒಡವೆಗಳನ್ನು ಮೋಶೆಯೂ, ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡರು. ಅವುಗಳೆಲ್ಲಾ ವಿಚಿತ್ರವಾದ ಆಭರಣಗಳು.
Kannada BSI Bible 2016
ಹಾಗೆ ಮೋಶೆಯೂ ಯಾಜಕನಾದ ಎಲ್ಲಾಜಾರನೂ ವಿಚಿತ್ರ ಕೆಲಸವಾಗಿ ರುವ ಬಂಗಾರವನ್ನೆಲ್ಲಾ ಅವರಿಂದ ತಕ್ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಕೊಟ್ಟ ಆ ಚಿನ್ನದ ಒಡವೆಗಳನ್ನು ಮೋಶೆಯೂ ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡರು; ಅವುಗಳೆಲ್ಲಾ ವಿಚಿತ್ರವಾಗಿ ಮಾಡಿದವುಗಳೇ.
Kannada Bible (KNCL) BSI 2016
ಅವರು ಕೊಟ್ಟ ಆ ಚಿನ್ನದ ಒಡವೆಗಳನ್ನೂ ವಿಚಿತ್ರ ಆಭರಣಗಳನ್ನೂ ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರನು ತೆಗೆದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯೂ, ಯಾಜಕನಾದ ಎಲಿಯಾಜರನೂ ವಿಚಿತ್ರ ಕೆಲಸವಾಗಿರುವ ಬಂಗಾರವನ್ನೆಲ್ಲಾ ಅದರಿಂದ ತೆಗೆದುಕೊಂಡರು.