Numbers 31:54 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕೊಟ್ಟ ಚಿನ್ನವನ್ನು ಮೋಶೆಯೂ ಯಾಜಕನಾದ ಎಲ್ಲಾಜಾರನೂ ತೆಗೆದುಕೊಂಡು ದೇವದರ್ಶನಗುಡಾರದಲ್ಲಿ ಇಟ್ಟರು. ಇಸ್ರೇಲರ ವಿಷಯದಲ್ಲಿ ಜ್ಞಾಪಕಾರ್ಥವಾಗಿ ಇದು ಯೆಹೋವನ ಸನ್ನಿಧಿಯಲ್ಲಿ ಇಡಲ್ಪಟ್ಟಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಕೊಟ್ಟ ಚಿನ್ನವನ್ನು ಮೋಶೆಯೂ, ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡು ಇಸ್ರಾಯೇಲರ ವಿಷಯದಲ್ಲಿ ಯೆಹೋವನಿಗೆ ಜ್ಞಾಪಕ ಮಾಡುವುದಕ್ಕಾಗಿ ದೇವದರ್ಶನದ ಗುಡಾರದೊಳಗೆ ತಂದರು.
Kannada BSI Bible 2016
ಆಗ ಮೋಶೆಯೂ ಯಾಜಕನಾದ ಎಲ್ಲಾಜಾ ರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತಕ್ಕೊಂಡು ಕರ್ತನ ಸಮ್ಮುಖದಲ್ಲಿ ಇಸ್ರಾಯೇಲ್‌ ಮಕ್ಕಳಿಗೆ ಜ್ಞಾಪಕಕ್ಕಾಗಿ ಸಭೆಯ ಗುಡಾರದೊಳಗೆ ತಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಕೊಟ್ಟ ಚಿನ್ನವನ್ನು ಮೋಶೆಯೂ ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡು ಇಸ್ರಾಯೇಲ್ಯರ ವಿಷಯದಲ್ಲಿ ಯೆಹೋವನಿಗೆ ಜ್ಞಾಪಕಕೊಡುವದಕ್ಕಾಗಿ ದೇವದರ್ಶನದ ಗುಡಾರದೊಳಗೆ ತಂದರು.
Kannada Bible (KNCL) BSI 2016
ಆದರೆ ಸಹಸ್ರಾಧಿಪತಿಗಳು ಮತ್ತು ಶತಾಧಿಪತಿಗಳು ಕೊಟ್ಟ ಚಿನ್ನವನ್ನು ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರನು ಸ್ವೀಕರಿಸಿ ಅದನ್ನು ಇಸ್ರಯೇಲರಿಗೋಸ್ಕರ ಸ್ಮರಣಾರ್ಥವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದೊಳಗಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆಯೂ, ಯಾಜಕನಾದ ಎಲಿಯಾಜರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತೆಗೆದುಕೊಂಡು, ಯೆಹೋವ ದೇವರ ಸಮ್ಮುಖದಲ್ಲಿ ಇಸ್ರಾಯೇಲರಿಗೆ ಜ್ಞಾಪಕಕ್ಕಾಗಿ ದೇವದರ್ಶನ ಗುಡಾರದೊಳಗೆ ತಂದರು.