Numbers 31:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯು ಅವರನ್ನು ಯುದ್ಧಕ್ಕೆ ಕಳುಹಿಸಿದನು. ಅವರ ಸಂಗಡ ಎಲ್ಲಾಜಾರನ ಮಗನಾದ ಫೀನೆಹಾಸನನ್ನೂ ಕಳುಹಿಸಿದನು. ಫೀನೆಹಾಸನು ಪವಿತ್ರವಸ್ತುಗಳನ್ನು ತೆಗೆದುಕೊಂಡನು ಮತ್ತು ಸೂಚನೆ ಕೊಡುವುದಕ್ಕಾಗಿ ತುತ್ತೂರಿಗಳನ್ನು ತೆಗೆದುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ಇವರನ್ನು ಯುದ್ಧಕ್ಕೆ ಕಳುಹಿಸುವಾಗ ಕುಲವೊಂದಕ್ಕೆ ಸಾವಿರ ಭಟರನ್ನು, ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನನ್ನು, ದೇವರ ಸಾಮಾನುಗಳನ್ನೂ, ಆಜ್ಞಾತುತೂರಿಗಳನ್ನೂ ತೆಗೆದುಕೊಂಡು ಅವರೊಡನೆ ಹೋಗಬೇಕೆಂದು ಆಜ್ಞಾಪಿಸಿದನು.
Kannada BSI Bible 2016
ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾ ಗಿರುವ ಅವರನ್ನೂ ಯಾಜಕನಾದ ಎಲ್ಲಾಜಾರನ ಮಗ ನಾದ ಫೀನೆಹಾಸನನ್ನೂ ಪರಿಶುದ್ಧ ಸಾಮಾಗ್ರಿಗಳ ಸಂಗಡಲೂ ಊದುವದಕ್ಕೆ ಅವನ ಕೈಯಲ್ಲಿರುವ ತುತೂರಿಗಳ ಸಂಗಡಲೂ ಯುದ್ಧಕ್ಕೆ ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆಯು ಇವರನ್ನು ಯುದ್ಧಕ್ಕೆ ಕಳುಹಿಸುವಾಗ ಮಹಾಯಾಜಕನಾದ ಎಲ್ಲಾಜಾರನ ಮಗ ಫೀನೆಹಾಸನಿಗೆ - ದೇವರ ಸಾಮಾನುಗಳನ್ನೂ ಆಜ್ಞಾತುತೂರಿಗಳನ್ನೂ ತೆಗೆದುಕೊಂಡು ಅವರೊಡನೆ ಹೋಗಬೇಕೆಂದು ಆಜ್ಞಾಪಿಸಿದನು.
Kannada Bible (KNCL) BSI 2016
ಮೋಶೆ ಇವರನ್ನು ಮಹಾಯಾಜಕನಾದ ಎಲ್ಲಾಜಾರನ ಮಗ ಫೀನೆಹಾಸನ ಮುಂದಾಳತ್ವದಲ್ಲಿ ಪವಿತ್ರ ಉಪಕರಣಗಳೊಂದಿಗೂ ಯುದ್ಧಕಹಳೆಗಳೊಂದಿಗೂ ಯುದ್ಧಕ್ಕೆ ಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿರುವ ಅವರನ್ನೂ ಯಾಜಕನಾದ ಎಲಿಯಾಜರನ ಮಗ ಫೀನೆಹಾಸನನ್ನೂ ಪರಿಶುದ್ಧ ಸಲಕರಣೆಗಳ ಸಂಗಡವೂ ಸೂಚಿಸುವದಕ್ಕೋಸ್ಕರ ತುತೂರಿಗಳ ಸಂಗಡವೂ ಯುದ್ಧಕ್ಕೆ ಕಳುಹಿಸಿದನು.