Numbers 31:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಕೊಂದವರಲ್ಲಿ ಎವೀ, ರೆಕೆಮ್, ಜೂರ್, ಹೂರ್ ಮತ್ತು ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಸೇರಿದ್ದರು. ಅವರು ಕತ್ತಿಯಿಂದ ಬೆಯೋರನ ಮಗನಾದ ಬಿಳಾಮನನ್ನೂ ಕೊಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಖಡ್ಗದಿಂದ ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕೊಂದುಬಿಟ್ಟರು.
Kannada BSI Bible 2016
ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್‌, ಚೂರ್‌, ಹೂರ್‌, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹತವಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ವಿುದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕಡಿದುಬಿಟ್ಟರು.
Kannada Bible (KNCL) BSI 2016
ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್ ಹಾಗು ರೆಬಾ ಎಂಬ ಮಿದ್ಯಾನರ ಐದು ಮಂದಿ ರಾಜರು ಇದ್ದರು. ಅದೂ ಅಲ್ಲದೆ ಬೆಯೋರನ ಮಗ ಬಿಳಾಮನನ್ನು ಕತ್ತಿಯಿಂದ ಕೊಂದುಹಾಕಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಂಡಸರೆಲ್ಲರನ್ನು ಕೊಂದುಹಾಕಿದರು. ಈ ಹತರಾದವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದುಹಾಕಿದರು. ಅವರು ಮಿದ್ಯಾನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗ ಬಿಳಾಮನನ್ನೂ ಖಡ್ಗದಿಂದ ಕೊಂದುಹಾಕಿದರು.