Numbers 32:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಗಳಿದ್ದವು. ಅವರು ಯಗ್ಜೇರ್ ಮತ್ತು ಗಿಲ್ಯಾದ್ ಪ್ರದೇಶಗಳನ್ನು ನೋಡಿದಾಗ ಅವು ಅವರ ಪಶುಗಳ ಮೇವಿಗೆ ಒಳ್ಳೆಯ ಸ್ಥಳವೆಂದು ತಿಳಿದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೂಬೇನ್ ಕುಲದವರಿಗೂ, ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಯಗ್ಜೇರ್, ಗಿಲ್ಯಾದ್ ಎಂಬ ಪ್ರದೇಶವನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.
Kannada BSI Bible 2016
ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಅವರು ಯಗ್ಜೇರ್, ಗಿಲ್ಯಾದ್ ಎಂಬ ಪ್ರದೇಶಗಳನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡು
Kannada Bible (KNCL) BSI 2016
ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಕುರಿಗಳಾಗಿದ್ದವು. ಯಗ್ಜೇರ್ ಹಾಗು ಗಿಲ್ಯಾದ್ ಪ್ರದೇಶಗಳನ್ನು ದನಕುರಿಗಳ ಮೇವಿಗೆ ತಕ್ಕ ಸ್ಥಳ ಎಂದು ಅವರು ನೋಡಿ ತಿಳಿದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಅಧಿಕ ಸಂಖೆಯಲ್ಲಿ ಪಶುಗಳು ಇದ್ದವು. ಅವರು ಯಜ್ಜೇರ್, ಗಿಲ್ಯಾದ್ ಎಂಬ ದೇಶಗಳನ್ನು ನೋಡಿದಾಗ, ಅದು ಪಶುಗಳಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.