Numbers 32:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದ್ದರಿಂದ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡು, ತನ್ನನ್ನು ಬೇಸರಗೊಳಿಸಿದ್ದ ಇಡೀ ತಲೆಮಾರು ಸಾಯುವತನಕ ಇಸ್ರೇಲರನ್ನು ಮರುಭೂಮಿಯಲ್ಲಿ ನಲವತ್ತು ವರ್ಷಗಳ ಕಾಲ ಅಲೆದಾಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡವನಾಗಿ ತನ್ನ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳ ಆ ಸಂತತಿಯವರೆಲ್ಲರೂ ನಾಶವಾಗುವ ತನಕ ನಲ್ವತ್ತು ವರ್ಷ, ಇಸ್ರಾಯೇಲರನ್ನು ಮರುಭೂಮಿಯಲ್ಲೇ ತಿರುಗಾಡುವಂತೆ ಮಾಡಿದನು.
Kannada BSI Bible 2016
ಹಾಗೆ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪೋ ದ್ರೇಕಗೊಂಡದ್ದರಿಂದ ಆತನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಮಸ್ತ ಸಂತತಿಯು ನಾಶವಾಗುವ ವರೆಗೆ ಅವರನ್ನು ಅರಣ್ಯದಲ್ಲಿ ನಾಲ್ವತ್ತು ವರುಷ ಅಲೆದಾಡು ವಂತೆ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಸ್ರಾಯೇಲ್ಯರ ಮೇಲೆ ಕೋಪಗೊಂಡವನಾಗಿ ತನ್ನ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳ ಆ ಸಂತತಿಯವರೆಲ್ಲರೂ ನಾಶವಾಗುವ ತನಕ, ಅಂದರೆ ನಾಲ್ವತ್ತು ವರುಷಕಾಲ, ಇಸ್ರಾಯೇಲ್ಯರನ್ನು ಅರಣ್ಯದಲ್ಲಿ ತಿರುಗಾಡ ಮಾಡಿದನು.
Kannada Bible (KNCL) BSI 2016
ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ತಮ್ಮ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳವರಾಗಿದ್ದ ಆ ಪೀಳಿಗೆಯವರೆಲ್ಲರು ನಾಶವಾಗುವ ತನಕ, ಅಂದರೆ ನಾಲ್ವತ್ತುವರ್ಷ ಕಾಲ, ಇಸ್ರಯೇಲರನ್ನು ಮರುಭೂಮಿಯಲ್ಲೆ ಅಲೆಯುವಂತೆ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಇಸ್ರಾಯೇಲರ ಮೇಲೆ ಕೋಪೋದ್ರೇಕಗೊಂಡದ್ದರಿಂದ, ಅವರ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಂತತಿಯು ದಹಿಸುವವರೆಗೆ ಅವರನ್ನು ಮರುಭೂಮಿಯಲ್ಲಿ ನಲವತ್ತು ವರ್ಷ ಅಲೆದಾಡುವಂತೆ ಮಾಡಿದರು.