Numbers 32:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಆತನನ್ನು ಹಿಂಬಾಲಿಸದೆ ಹೋದರೆ, ಆತನು ಇಸ್ರೇಲರನ್ನು ಮರುಭೂಮಿಯಲ್ಲಿ ಇನ್ನೂ ಹೆಚ್ಚು ಕಾಲ ಬಿಟ್ಟುಬಿಡುವನು. ಈ ಜನರೆಲ್ಲರ ನಾಶನಕ್ಕೆ ನೀವೇ ಕಾರಣರಾಗುವಿರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಆತನನ್ನು ಹಿಂಬಾಲಿಸದೆ ಇರುವ ಕಾರಣ ಆತನು ಆ ಜನರನ್ನು ಮರುಭೂಮಿಯಲ್ಲಿ ಇರಿಸಿದರೆ, ಈ ಸಮಸ್ತ ಜನಾಂಗವನ್ನು ನೀವೇ ನಾಶ ಮಾಡುವಿರಿ” ಎಂದು ಹೇಳಿದನು.
Kannada BSI Bible 2016
ನೀವು ಆತನ ಕಡೆಯಿಂದ ತಿರುಗಿದರೆ ಆತನು ಇನ್ನೂ ಹೆಚ್ಚಾಗಿ ಅವರನ್ನು ಅರಣ್ಯದಲ್ಲಿ ಇರಿಸಿ ಬಿಡುವನು; ನೀವು ಈ ಸಮಸ್ತ ಜನರನ್ನು ನಾಶಮಾಡುವಿರಿ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಆತನನ್ನು ಹಿಂಬಾಲಿಸದೆ ನಡೆಯುವ ಕಾರಣ ಆತನು ಈ ಜನರನ್ನು ಅರಣ್ಯದಲ್ಲಿ ಇನ್ನೂ ಇರಿಸಿದರೆ ಈ ಸಮಸ್ತಜನಾಂಗದ ನಾಶಕ್ಕೆ ನೀವೇ ಕಾರಣರಾಗುವಿರಿ ಎಂದು ಹೇಳಿದನು.
Kannada Bible (KNCL) BSI 2016
ನೀವು ವಿಧೇಯರಾಗಿ ನಡೆಯದೆ ಹೋದರೆ ಸರ್ವೇಶ್ವರ ಈ ಜನರನ್ನು ಇನ್ನೂ ಮರುಭೂಮಿಯಲ್ಲೇ ಇರಿಸುವರು; ಈ ಸಮಸ್ತ ಜನಾಂಗದ ನಾಶಕ್ಕೆ ನೀವೇ ಕಾರಣರು ಆಗುವಿರಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನೀವು ದೇವರ ಕಡೆಯಿಂದ ತೊಲಗಿದರೆ, ದೇವರು ಅವರನ್ನು ಮರುಭೂಮಿಯಲ್ಲಿಯೇ ಇರಿಸಿಬಿಡುವನು. ನೀವು ಈ ಸಮಸ್ತ ಜನರ ನಾಶಕ್ಕೆ ನೀವೇ ಕಾರಣರಾಗುವಿರಿ,” ಎಂದು ಹೇಳಿದನು.