Numbers 32:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಇಸ್ರೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವವರೆಗೆ ನಾವು ಅವರ ಮುಂದೆ ಹೋಗುವ ಸೈನಿಕರಾಗಿ ಹೊರಡುವೆವು ಅಲ್ಲದೆ ನಮ್ಮ ಸ್ತ್ರೀಯರು ಮತ್ತು ಮಕ್ಕಳು ಈ ದೇಶದ ಇತರ ನಿವಾಸಿಗಳಿಂದ ತೊಂದರೆಗೊಳಗಾಗದೆ ಕೋಟೆಗಳುಳ್ಳ ಊರುಗಳಲ್ಲಿ ಸುರಕ್ಷಿತವಾಗಿರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವಾದರೋ ಇಸ್ರಾಯೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವವರೆಗೂ ಯುದ್ಧಕ್ಕೆ ಸನ್ನದ್ಧರಾಗಿ ಅವರ ಮುಂದೆ ನಡೆಯುವೆವು. ಅಷ್ಟರಲ್ಲಿ ನಮ್ಮ ಕುಟುಂಬಗಳವರು ಈ ದೇಶದ ನಿವಾಸಿಗಳ ಭಯದ ದೆಸೆಯಿಂದ ಕೋಟೆಕೋತ್ತಲುಗಳುಳ್ಳ ಊರುಗಳಲ್ಲಿ ವಾಸಿಸಲಿ.
Kannada BSI Bible 2016
ಆದರೆ ನಾವು ಇಸ್ರಾಯೇಲ್‌ ಮಕ್ಕಳ ಮುಂದೆ ಅವರನ್ನು ಅವರ ಸ್ಥಳದೊಳಗೆ ಸೇರಿಸುವ ವರೆಗೆ ಯುದ್ಧಕ್ಕೆ ಸಿದ್ಧ ವಾಗಿ ಓಡುವೆವು; ನಮ್ಮ ಮಕ್ಕಳು ಮಾತ್ರ ಈ ದೇಶದ ನಿವಾಸಿಗಳ ದೆಸೆಯಿಂದ ಭದ್ರವಾದ ಊರುಗಳಲ್ಲಿ ವಾಸವಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವಾದರೋ ಇಸ್ರಾಯೇಲ್ಯರನ್ನು ಅವರವರ ಸ್ಥಳಗಳಿಗೆ ಸೇರಿಸುವವರೆಗೂ ಯುದ್ಧಕ್ಕೆ ಸನ್ನದ್ಧರಾಗಿ ಅವರ ಮುಂದೆ ನಡೆಯುವೆವು. ಅಷ್ಟರಲ್ಲಿ ನಮ್ಮ ಕುಟುಂಬಗಳವರು ಈ ದೇಶದ ನಿವಾಸಿಗಳ ಭಯದ ದೆಸೆಯಿಂದ ಕೋಟೆಕೊತ್ತಲುಗಳುಳ್ಳ ಊರುಗಳಲ್ಲಿ ವಾಸಿಸಲಿ.
Kannada Bible (KNCL) BSI 2016
ಆದರೆ ನಾವು ಇಸ್ರಯೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವ ತನಕ ಯುದ್ಧಕ್ಕೆ ಸನ್ನದ್ಧರಾಗಿ ಅವರ ಮುಂದೆಯೇ ನಡೆಯುತ್ತೇವೆ. ಅಷ್ಟರಲ್ಲಿ ನಮ್ಮ ಕುಟುಂಬಗಳವರು ಕೋಟೆ ಕಟ್ಟಿದ ಊರುಗಳಲ್ಲಿ ವಾಸಿಸಲಿ. ಏಕೆಂದರೆ ಈ ನಾಡಿನ ನಿವಾಸಿಗಳ ಭಯವಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾವು ಇಸ್ರಾಯೇಲರ ಮುಂದೆ ಅವರನ್ನು ಅವರ ಸ್ಥಳದೊಳಗೆ ಸೇರಿಸುವವರೆಗೆ ಯುದ್ಧಕ್ಕೆ ಸಿದ್ಧರಾಗಿ ಓಡುವೆವು. ನಮ್ಮ ಸ್ತ್ರೀಯರು ಮತ್ತು ಮಕ್ಕಳು ಮಾತ್ರ ಈ ದೇಶದ ನಿವಾಸಿಗಳ ದೆಸೆಯಿಂದ ಭದ್ರವಾದ ಊರುಗಳಲ್ಲಿ ವಾಸವಾಗಿರಬೇಕು.