Numbers 32:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮಗೆ ಜೋರ್ಡನ್ ಹೊಳೆಯ ಈಚೆ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವು ದೊರಕಿದ್ದರಿಂದ ನಾವು ಹೊಳೆಯ ಆಚೆ ಎಲ್ಲಿಯೂ ಅವರೊಂದಿಗೆ ಸ್ವಾಸ್ತ್ಯವನ್ನು ಅಪೇಕ್ಷಿಸುವುದಿಲ್ಲ” ಅಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮಗೆ ಯೊರ್ದನ್ ನದಿಯ ಆಚೆ ಪೂರ್ವ ದಿಕ್ಕಿನಲ್ಲಿ ಸ್ವತ್ತನ್ನು ಅಪೇಕ್ಷಿಸುವುದಿಲ್ಲ” ಎಂದರು.
Kannada BSI Bible 2016
ನಾವು ಯೊರ್ದನ್ ನದಿಯ ಆಚೆಯಲ್ಲಿ ಅವರ ಸಂಗಡ ಸ್ವಾಸ್ತ್ಯವನ್ನು ತಕ್ಕೊಳ್ಳುವದಿಲ್ಲ. ಯಾಕಂದರೆ ನಮ್ಮ ಸ್ವಾಸ್ತ್ಯವು ನಮಗೆ ಯೊರ್ದನ್ ನದಿಯ ಈಚೆಯಲ್ಲಿ ಮೂಡಣ ಕಡೆಯಲ್ಲಿ ಬಂತು ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮಗೆ ಯೊರ್ದನ್ ಹೊಳೆಯ ಈಚೆ ಮೂಡಣ ದಿಕ್ಕಿನಲ್ಲಿ ಸ್ವಾಸ್ತ್ಯವು ದೊರಕಿದದರಿಂದ ನಾವು ಹೊಳೆಯ ಆಚೆ ಎಲ್ಲಿಯೂ ಅವರೊಂದಿಗೆ ಸ್ವಾಸ್ತ್ಯವನ್ನು ಅಪೇಕ್ಷಿಸುವದಿಲ್ಲ ಅಂದರು.
Kannada Bible (KNCL) BSI 2016
ನಮಗೆ ಜೋರ್ಡನ್ ನದಿಯ ಈಚೆ ಪೂರ್ವ ದಿಕ್ಕಿನಲ್ಲಿ ಸೊತ್ತು ದೊರಕಿದ್ದುದರಿಂದ ನಾವು ನದಿಯ ಆಚೆ ಎಲ್ಲಿಯೂ ಅವರೊಂದಿಗೆ ಸೊತ್ತನ್ನು ಅಪೇಕ್ಷಿಸುವುದಿಲ್ಲ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಯೊರ್ದನ್ ನದಿಯ ಆಚೆಯಲ್ಲಿ ಅವರ ಸಂಗಡ ಸೊತ್ತನ್ನು ತೆಗೆದುಕೊಳ್ಳುವುದಿಲ್ಲ. ಏಕೆಂದರೆ ನಮ್ಮ ಸೊತ್ತು ನಮಗೆ ಯೊರ್ದನ್ ನದಿಯ ಈಚೆ ಪೂರ್ವದಿಕ್ಕಿನಲ್ಲಿ ಬಂತು,” ಎಂದನು.