Numbers 32:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀವು ಈ ಸಂಗತಿಗಳನ್ನು ಮಾಡದಿದ್ದರೆ, ಯೆಹೋವನಿಗೆ ವಿರೋಧವಾಗಿ ಪಾಪ ಮಾಡಿದವರಾಗಿರುವಿರಿ. ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ಖಚಿತವಾಗಿ ತಿಳಿದುಕೊಳ್ಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆದರೆ ನೀವು ಹಾಗೆ ಮಾಡದೆ ಹೋದರೆ, ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ತಿಳಿದುಕೊಳ್ಳಿರಿ.
Kannada BSI Bible 2016
ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನೀವು ಹಾಗೆ ಮಾಡದೆಹೋದರೆ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ; ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವದು ಎಂದು ತಿಳಿದುಕೊಳ್ಳಿರಿ.
Kannada Bible (KNCL) BSI 2016
ನೀವು ಹಾಗೇನಾದರೂ ಮಾಡದೆ ಹೋದರೆ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದವರಾಗುವಿರಿ. ನಿಮ್ಮನ್ನು ದಂಡಿಸುವ ತನಕ ನಿಮ್ಮ ಪಾಪ ನಿಮ್ಮ ಬೆನ್ನತ್ತಿಬರುವುದೆಂದು ತಿಳಿದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಯೆಹೋವ ದೇವರ ವಿರೋಧವಾಗಿ ಪಾಪಮಾಡಿದವರಾಗುವಿರಿ, ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವುದೆಂದು ತಿಳಿದುಕೊಳ್ಳಿರಿ.