Numbers 32:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಿನ್ನ ಸೇವಕರಾದ ನಾವು ಮತ್ತು ದಂಡೆಯಾತ್ರೆಗಾಗಿ ಆರಿಸಲ್ಪಟ್ಟವರು ನಿನ್ನ ಆಜ್ಞೆಯ ಪ್ರಕಾರ ಜೋರ್ಡನ್ ನದಿಯನ್ನು ಯೆಹೋವನ ಮುಂದೆ ದಾಟಿಹೋಗಿ ಹೋರಾಡುತ್ತೇವೆ” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ದಾಸರಾದ ನಮ್ಮಲ್ಲಿ ಯುದ್ಧಸನ್ನದ್ಧರೆಲ್ಲರೂ ಸ್ವಾಮಿಯವರ ಅಪ್ಪಣೆಯ ಪ್ರಕಾರ ಯೆಹೋವನ ಮುಂದುಗಡೆಯಲ್ಲಿ ಹೊರಟು ನದಿಯನ್ನು ದಾಟಿ ಯುದ್ಧಮಾಡುವೆವು” ಎಂದು ಉತ್ತರ ಕೊಟ್ಟರು.
Kannada BSI Bible 2016
ಆದರೆ ನಿನ್ನ ಸೇವಕರು ಯುದ್ಧಕ್ಕೆ ಸಿದ್ಧವಾದವರೆಲ್ಲರು ನಮ್ಮ ಒಡೆಯನು ಹೇಳಿದ ಪ್ರಕಾರ ಕರ್ತನ ಮುಂದೆ ಯುದ್ಧಕ್ಕೆ ದಾಟಿ ಹೋಗುವರು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ದಾಸರಾದ ನಮ್ಮಲ್ಲಿ ಯುದ್ಧ ಸನ್ನದ್ಧರೆಲ್ಲರೂ ಸ್ವಾವಿುಯವರ ಅಪ್ಪಣೆಯ ಮೇರೆಗೆ ಯೆಹೋವನ ಮುಂದುಗಡೆಯಲ್ಲಿ ಹೊರಟು ಹೊಳೆಯನ್ನು ದಾಟಿ ಯುದ್ಧಮಾಡುವೆವು ಎಂದು ಉತ್ತರಕೊಟ್ಟರು.
Kannada Bible (KNCL) BSI 2016
ನಿಮ್ಮ ದಾಸರಾದ ನಮ್ಮಲ್ಲಿ ಯುದ್ಧಸನ್ನದ್ಧರೆಲ್ಲರು ತಮ್ಮ ಅಪ್ಪಣೆಯ ಮೇರೆಗೆ ಸರ್ವೇಶ್ವರನ ಸಮ್ಮುಖದಲ್ಲೇ ಮುನ್ನಡೆದು, ನದಿಯನ್ನು ದಾಟಿ ಯುದ್ಧಮಾಡುತ್ತೇವೆ,” ಎಂದು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಿನ್ನ ಸೇವಕರು ಯುದ್ಧಕ್ಕೆ ಸಿದ್ಧವಾದವರೆಲ್ಲರೂ ನಮ್ಮ ಒಡೆಯನು ಹೇಳಿದ ಪ್ರಕಾರ ಯೆಹೋವ ದೇವರ ಮುಂದೆ ಯುದ್ಧಕ್ಕೆ ದಾಟಿಹೋಗುವರು,” ಎಂದರು.