Numbers 32:41 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮನಸ್ಸೆಯ ಕುಲದವನಾದ ಯಾಯೀರನು ಅಮೋರಿಯರ ಕೋಟೆಗಳುಳ್ಳ ಹಳ್ಳಿಗಳನ್ನು ವಶಪಡಿಸಿಕೊಂಡು ಅವುಗಳಿಗೆ, “ಯಾಯೀರನ ಹಳ್ಳಿಗಳು” ಎಂದು ಹೆಸರಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನಸ್ಸೆಯ ವಂಶದವನಾದ ಯಾಯೀರನು ಯುದ್ಧಕ್ಕೆ ಹೊರಟು ಅಮೋರಿಯರ ಗ್ರಾಮಗಳನ್ನು ಸ್ವಾಧೀನಮಾಡಿಕೊಂಡು ಅವುಗಳಿಗೆ ಯಾಯೀರನ ಗ್ರಾಮಗಳೆಂದು ಹೆಸರಿಟ್ಟನು.
Kannada BSI Bible 2016
ಆದರೆ ಮನಸ್ಸೆಯ ಮಗನಾದ ಯಾಯಾ ರನು ಹೋಗಿ, ಅವರ ನಗರಗಳನ್ನು ತಕ್ಕೊಂಡು, ಅವುಗಳಿಗೆ ಯಾಯಾರನ ನಗರಗಳೆಂದು ಹೆಸರಿಟ್ಟನು.ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನಸ್ಸೆಯ ವಂಶದವನಾದ ಯಾಯೀರನು ಯುದ್ಧಕ್ಕೆ ಹೊರಟು ಅಮೋರಿಯರ ಗ್ರಾಮಗಳನ್ನು ಸ್ವಾಧೀನಮಾಡಿಕೊಂಡು ಅವುಗಳಿಗೆ ಯಾಯೀರನ ಗ್ರಾಮಗಳೆಂದು ಹೆಸರಿಟ್ಟನು.
Kannada Bible (KNCL) BSI 2016
ಮನಸ್ಸೆಯ ವಂಶದವನಾದ ಯಾಯಿರನು ಯುದ್ಧಕ್ಕೆ ಹೊರಟು ಅಮೋರಿಯರ ಗ್ರಾಮಗಳನ್ನು ಸ್ವಾಧೀನಪಡಿಸಿಕೊಂಡನು. ಅವುಗಳಿಗೆ ಯಾಯಿರನ ಗ್ರಾಮಗಳೆಂದು ಹೆಸರು ಇಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಮನಸ್ಸೆಯ ಮಗ ಯಾಯೀರನು ಹೋಗಿ, ಅವರ ನಗರಗಳನ್ನು ತೆಗೆದುಕೊಂಡು, ಅವುಗಳಿಗೆ ಯಾಯೀರನ ಹಳ್ಳಿಗಳೆಂದು ಹೆಸರಿಟ್ಟನು.