Numbers 32:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಈ ಪ್ರದೇಶವನ್ನೇ ನಮಗೆ ಸ್ವಾಸ್ತ್ಯವನ್ನಾಗಿ ಕೊಟ್ಟರೆ ನಮಗೆ ಉಪಕಾರ ಮಾಡಿದಂತಾಗುವುದು. ನಾವು ಜೋರ್ಡನ್ ನದಿಯನ್ನು ದಾಟಿ ಹೋಗುವಂತೆ ಮಾಡಬೇಡ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ನೀವು, ದಾಸರಾದ ನಮ್ಮ ಮೇಲೆ ದಯೆ ಇಟ್ಟು ನಮ್ಮನ್ನು ಯೊರ್ದನ್ ನದಿಯ ಆಚೆಗೆ ಬರಮಾಡಿದ ಈ ಪ್ರದೇಶವನ್ನೇ ಸ್ವತ್ತಾಗಿ ಕೊಡಬೇಕು” ಎಂದು ಕೇಳಿಕೊಂಡರು.
Kannada BSI Bible 2016
ಆದದರಿಂದ ನಮಗೆ ನಿಮ್ಮ ದೃಷ್ಟಿಯಲ್ಲಿ ದಯವು ಸಿಕ್ಕಿದ್ದಾದರೆ ಈ ದೇಶವನ್ನು ನಿಮ್ಮ ಸೇವಕರಿಗೆ ಸ್ವಾಸ್ತ್ಯಕ್ಕಾಗಿ ಕೊಡಬೇಕು; ನಮ್ಮನ್ನು ಯೊರ್ದನ್ ನದಿಯ ಆಚೆಗೆ ತಕ್ಕೊಂಡು ಹೋಗಬೇಡಿರಿ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ನೀವು ದಾಸರಾದ ನಮ್ಮ ಮೇಲೆ ದಯವಿಟ್ಟು ನಮ್ಮನ್ನು ಯೊರ್ದನ್ ಹೊಳೆಯ ಆಚೆಗೆ ಬರಮಾಡದೆ ಈ ಪ್ರದೇಶವನ್ನೇ ಸ್ವಾಸ್ತ್ಯಕ್ಕಾಗಿ ಕೊಡಬೇಕೆಂದು ಕೇಳಿಕೊಂಡರು.
Kannada Bible (KNCL) BSI 2016
ಆದಕಾರಣ ದಾಸರಾದ ನಮ್ಮ ಮೇಲೆ ದಯವಿಟ್ಟು ನಮ್ಮನ್ನು ಜೋರ್ಡನ್ ನದಿಯ ಆಚೆಗೆ ಬರಮಾಡಬೇಡಿ. ಈ ಪ್ರದೇಶವನ್ನೇ ಸೊತ್ತಾಗಿ ಕೊಡಿ,” ಎಂದು ಕೇಳಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನಮಗೆ ನಿಮ್ಮ ದೃಷ್ಟಿಯಲ್ಲಿ ದಯೆಯು ಸಿಕ್ಕಿದ್ದಾದರೆ, ಈ ದೇಶವನ್ನು ನಿಮ್ಮ ಸೇವಕರಿಗೆ ಸ್ವಾಸ್ತ್ಯಕ್ಕಾಗಿ ಕೊಡಬೇಕು. ನಮ್ಮನ್ನು ಯೊರ್ದನ್ ನದಿಯ ಆಚೆಗೆ ತೆಗೆದುಕೊಂಡು ಹೋಗಬೇಡಿರಿ,” ಎಂದರು.