Numbers 32:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದೇಶವನ್ನು ನೋಡಿಕೊಂಡು ಬರುವುದಕ್ಕೆ ನಾನು ಕಾದೇಶ್ ಬರ್ನೇಯದಿಂದ ನಿಮ್ಮ ಪೂರ್ವಿಕರನ್ನು ಗೂಢಚಾರರನ್ನಾಗಿ ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರಲ್ಲಾ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದೇಶವನ್ನು ನೋಡಿಕೊಂಡು ಬರುವುದಕ್ಕೆ ನಾನು ಕಾದೇಶ್ ಬರ್ನೇಯದಿಂದ ನಿಮ್ಮ ತಂದೆಯರನ್ನು ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರು.
Kannada BSI Bible 2016
ನಾನು ದೇಶವನ್ನು ನೋಡುವದಕ್ಕೆ ಕಾದೇಶ್‌ಬರ್ನೇಯದಿಂದ ಅವರನ್ನು ಕಳುಹಿಸಿದಾಗ ನಿಮ್ಮ ಪಿತೃಗಳು ಹಾಗೆಯೇ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದೇಶವನ್ನು ನೋಡಿಕೊಂಡು ಬರುವದಕ್ಕೆ ನಾನು ಕಾದೇಶ್‍ಬರ್ನೇಯದಿಂದ ನಿಮ್ಮ ತಂದೆಗಳನ್ನು ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರಲ್ಲಾ;
Kannada Bible (KNCL) BSI 2016
ಆ ನಾಡನ್ನು ನೋಡಿಕೊಂಡು ಬರುವುದಕ್ಕೆ ನಾನು ಕಾದೇಶ್ ಬರ್ನೇಯದಿಂದ ನಿಮ್ಮ ಪೂರ್ವಜರನ್ನು ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ದೇಶವನ್ನು ನೋಡುವುದಕ್ಕೆ ಕಾದೇಶ್ ಬರ್ನೇಯದಿಂದ ಅವರನ್ನು ಕಳುಹಿಸಿದಾಗ, ನಿಮ್ಮ ಪಿತೃಗಳು ಹಾಗೆಯೇ ಮಾಡಿದರು.