Numbers 33:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೊದಲನೆ ತಿಂಗಳಿನ ಹದಿನೈದನೆಯ ದಿನದಲ್ಲಿ ಅವರು ರಮ್ಸೇಸ್ ಪಟ್ಟಣವನ್ನು ಬಿಟ್ಟು ಹೊರಟರು. ಪಸ್ಕಹಬ್ಬದ ಮರುದಿನದಲ್ಲಿ ಇಸ್ರೇಲರು ಜಯದೊಂದಿಗೆ ತಮ್ಮ ಕೈಗಳನ್ನು ಎತ್ತಿಕೊಂಡು ಈಜಿಪ್ಟಿನಿಂದ ಹೊರಗೆ ನಡೆದರು. ಈಜಿಪ್ಟಿನ ಜನರೆಲ್ಲರೂ ಇದನ್ನು ನೋಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೊದಲನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಪಸ್ಕಹಬ್ಬದ ಮರುದಿನದಲ್ಲಿ ಇಸ್ರಾಯೇಲರು ಐಗುಪ್ತ್ಯರ ಎದುರಿನಲ್ಲೇ ರಮ್ಸೇಸಿನಿಂದ ಹೊರಟರು.
Kannada BSI Bible 2016
ಅವರ ಪ್ರಯಾಣಗಳ ಹೊರಡೋಣಗಳು ಯಾವ ವೆಂದರೆ--ಅವರು ಮೊದಲನೇ ತಿಂಗಳಿನ ಹದಿನೈದನೇ ದಿವಸದಲ್ಲಿ ಪಸ್ಕ ಹಬ್ಬದ ಮರು ದಿವಸದಲ್ಲಿ ರಮ್ಸೇಸಿ ನಿಂದ ಹೊರಟರು; ಇಸ್ರಾಯೇಲ್ ಮಕ್ಕಳು ಸಮಸ್ತ ಐಗುಪ್ತ್ಯರ ಎದುರಿನಲ್ಲೇ ಜಯೋತ್ಸವದಿಂದ ಹೊರಟು ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೊದಲನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಅಂದರೆ ಪಸ್ಕಹಬ್ಬದ ಮರುದಿನದಲ್ಲಿ ಇಸ್ರಾಯೇಲ್ಯರು ಐಗುಪ್ತ್ಯರ ಎದುರಿನಲ್ಲೇ ಅಟ್ಟಹಾಸದಿಂದ ರಮ್ಸೇಸಿನಿಂದ ಹೊರಟರು.
Kannada Bible (KNCL) BSI 2016
ಮೊದಲನೆಯ ತಿಂಗಳಿನ ಹದಿನೈದನೆಯ ದಿನ, ಅಂದರೆ ಪಾಸ್ಕಹಬ್ಬದ ಮರುದಿನ, ಇಸ್ರಯೇಲರು ಈಜಿಪ್ಟರ ಎದುರಿನಲ್ಲೇ ಅಟ್ಟಹಾಸದಿಂದ ರಮ್ಸೇಸಿನಿಂದ ಹೊರಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಪ್ರಯಾಣಗಳ ವಿವರಗಳು ಯಾವುವೆಂದರೆ: ಅವರು ಮೊದಲನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ಪಸ್ಕಹಬ್ಬದ ಮರುದಿನ ಇಸ್ರಾಯೇಲರು ಸಮಸ್ತ ಈಜಿಪ್ಟನವರ ಎದುರಿನಲ್ಲೇ ಅಟ್ಟಹಾಸದಿಂದ ರಮ್ಸೇಸಿನಿಂದ ಹೊರಟು ಹೋದರು.