Numbers 33:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಹಾಯಾಜಕನಾದ ಆರೋನನು ಯೆಹೋವನಿಂದ ಆಜ್ಞಾಪಿಸಲ್ಪಟ್ಟ ಹೋರ್ ಬೆಟ್ಟವನ್ನು ಹತ್ತಿದನು. ಇಸ್ರೇಲರು ಈಜಿಪ್ಟನ್ನು ಬಿಟ್ಟು ಹೊರಟ ನಂತರ ನಲವತ್ತನೆ ವರ್ಷದ ಐದನೆ ತಿಂಗಳಿನ ಮೊದಲನೆ ದಿನದಲ್ಲಿ ಆರೋನನು ಅಲ್ಲಿ ಪ್ರಾಣಬಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಹಾಯಾಜಕನಾದ ಆರೋನನು ಯೆಹೋವನಿಂದ ಅಪ್ಪಣೆಯನ್ನು ಹೊಂದಿ ಹೋರ್ ಬೆಟ್ಟವನ್ನು ಹತ್ತಿ, ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ನಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಅಲ್ಲೇ ಪ್ರಾಣಬಿಟ್ಟನು.
Kannada BSI Bible 2016
ಆಗ ಯಾಜಕನಾದ ಆರೋನನು ಕರ್ತನ ಆಜ್ಞೆಯ ಪ್ರಕಾರ ಹೋರ್ ಗುಡ್ಡದ ಮೇಲೆ ಏರಿ ಅಲ್ಲಿ ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದಿಂದ ಹೊರಟ ನಾಲ್ವತ್ತನೇ ವರುಷದ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಸತ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಹಾಯಾಜಕ ಆರೋನನು ಯೆಹೋವನಿಂದ ಅಪ್ಪಣೆಯನ್ನು ಹೊಂದಿ ಹೋರ್ ಬೆಟ್ಟವನ್ನು ಹತ್ತಿ ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಟ ನಾಲ್ವತ್ತನೆಯ ವರುಷದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಅಲ್ಲೇ ಪ್ರಾಣಬಿಟ್ಟನು.
Kannada Bible (KNCL) BSI 2016
ಮಹಾಯಾಜಕ ಆರೋನನು ಸರ್ವೇಶ್ವರನಿಂದ ಅಪ್ಪಣೆಯನ್ನು ಪಡೆದು ಆ ಹೋರ್ ಬೆಟ್ಟವನ್ನು ಹತ್ತಿ ಅಲ್ಲೇ ಪ್ರಾಣಬಿಟ್ಟನು. ಇಸ್ರಯೇಲರು ಈಜಿಪ್ಟಿನಿಂದ ಹೊರಟ ನಾಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿನ ಅದಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಜಕನಾದ ಆರೋನನು ಯೆಹೋವ ದೇವರ ಆಜ್ಞೆಯ ಪ್ರಕಾರ ಹೋರ್ ಗುಡ್ಡದ ಮೇಲೆ ಏರಿ, ಅಲ್ಲಿ ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ನಾಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ನಿಧನ ಹೊಂದಿದನು.