Numbers 33:55 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ಆ ದೇಶದ ನಿವಾಸಿಗಳನ್ನು ಹೊರಡಿಸದೆ ಹೋದರೆ, ಅವರು ಉಳಿದುಕೊಂಡು ನಿಮ್ಮ ಕಣ್ಣುಗಳಲ್ಲಿ ಮರದ ಚೂರಿನಂತೆಯೂ ನಿಮ್ಮ ಪಕ್ಕೆಗಳಲ್ಲಿ ಮುಳ್ಳುಗಳಂತೆಯೂ ಇರುವರು. ನೀವು ವಾಸಿಸುವ ದೇಶದಲ್ಲಿ ನಿಮಗೆ ತೊಂದರೆ ಮಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ದೇಶದ ನಿವಾಸಿಗಳನ್ನು ಹೊರಡಿಸಿಬಿಡದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆಯೂ, ಪಕ್ಕೆತಿವಿಯುವ ಶೂಲಗಳಂತೆಯೂ, ಆಗಿ ನೀವು ವಾಸಿಸುವ ದೇಶದಲ್ಲಿ ನಿಮಗೆ ಕಂಟಕರಾಗಿರುವರು.
Kannada BSI Bible 2016
ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿ ಗಳನ್ನು ಹೊರಡಿಸದಿದ್ದರೆ ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ ನಿಮ್ಮ ಪಾರ್ಶ್ವಗಳಲ್ಲಿ ಕಂಟಕಗಳಾಗಿಯೂ ಇರುವರು; ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು.ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ದೇಶದ ನಿವಾಸಿಗಳನ್ನು ಹೊರಡಿಸಿಬಿಡದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆಯೂ ಪಕ್ಕೆ ತಿವಿಯುವ ಶೂಲಗಳಂತೆಯೂ ಆಗಿ ನೀವು ವಾಸಿಸುವ ದೇಶದಲ್ಲಿ ನಿಮಗೆ ಕಂಟಕರಾಗಿರುವರು.
Kannada Bible (KNCL) BSI 2016
ನೀವು ಆ ನಾಡಿನ ನಿವಾಸಿಗಳನ್ನು ಹೊರಡಿಸದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆ ಆಗುವರು; ಪಕ್ಕೆ ತಿವಿಯುವ ಶೂಲಗಳಂತೆ ಆಗುವರು; ನೀವು ವಾಸಿಸುವ ನಾಡಿನಲ್ಲಿ ನಿಮಗೆ ಕಂಠಕಪ್ರಾಯರಾಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿಗಳನ್ನು ಹೊರಡಿಸದಿದ್ದರೆ, ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ, ನಿಮ್ಮ ಪಕ್ಕೆಗಳಲ್ಲಿ ಕಂಟಕಗಳಾಗಿಯೂ ಇರುವರು. ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು.