Numbers 34:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಈ ಮೇರೆಯು ಜೋರ್ಡನ್ ನದಿಯ ಉದ್ದಕ್ಕೂ ಮುಂದುವರೆಯುವುದು. ಅದು ಉಪ್ಪು ಸಮುದ್ರದಲ್ಲಿ ಕೊನೆಗೊಳ್ಳುವುದು. ಇವುಗಳೇ ನಿಮ್ಮ ದೇಶದ ಸುತ್ತಲಿನ ಮೇರೆಗಳು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿಂದ ಅದು ಯೊರ್ದನ್ ನದಿಗೆ ಇಳಿದು ಅದನ್ನು ಅನುಸರಿಸಿ ಲವಣಸಮುದ್ರದ ಬಳಿಯಲ್ಲಿ ಮುಗಿಯಬೇಕು. ಇವೇ ನಿಮ್ಮ ದೇಶದ ಮೇರೆಗಳು’” ಎಂದನು.
Kannada BSI Bible 2016
ಅಲ್ಲಿಂದ ಮೇರೆಯು ಯೊರ್ದನ್‌ ನದಿಗೆ ಅನುಸಾರ ವಾಗಿ ಇಳಿದು ಉಪ್ಪಿನ ಸಮುದ್ರದಲ್ಲಿ ಮುಗಿಯುವದು; ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿಂದ ಅದು ಯೊರ್ದನ್ ಹೊಳೆಗೆ ಇಳಿದು [ಅದನ್ನು ಅನುಸರಿಸಿ] ಲವಣ ಸಮುದ್ರದ ಬಳಿಯಲ್ಲಿ ಮುಗಿಯಬೇಕು. ಇವೇ ನಿಮ್ಮ ದೇಶದ ಮೇರೆಗಳು ಅಂದನು.
Kannada Bible (KNCL) BSI 2016
ಅದೂ ಅಲ್ಲಿಂದ ಜೋರ್ಡನ್ ನದಿಗೆ ಇಳಿದು, ಅದನ್ನು ಅನುಸರಿಸುತ್ತಾ ಲವಣ ಸಮುದ್ರದ ಬಳಿಯಲ್ಲಿ ಮುಗಿಯಬೇಕು.’ ಇವೇ ನಿಮ್ಮ ನಾಡಿನ ಮೇರೆಗಳು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿಂದ ಮೇರೆಯು ಯೊರ್ದನ್ ನದಿಗೆ ಅನುಸಾರವಾಗಿ ಇಳಿದು, ಉಪ್ಪಿನ ಸಮುದ್ರದಲ್ಲಿ ಮುಗಿಯುವುದು. “ ‘ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು.’ ”