Numbers 34:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯು ಇಸ್ರೇಲರಿಗೆ ಹೀಗೆ ಆಜ್ಞಾಪಿಸಿದನು: “ನೀವು ಚೀಟುಹಾಕಿ ಭಾಗಮಾಡಿಕೊಳ್ಳುವ ದೇಶವೇ ಇದು. ಒಂಭತ್ತುವರೆ ಕುಲಗಳವರಿಗೆ ಈ ದೇಶವನ್ನು ಕೊಡಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕನುಸಾರವಾಗಿ ಮೋಶೆಯು ಇಸ್ರಾಯೇಲರಿಗೆ, “ನೀವು ಚೀಟುಹಾಕಿ ಹಂಚಿಕೊಳ್ಳಬೇಕೆಂದು ಯೆಹೋವನು ಆಜ್ಞಾಪಿಸಿದ ದೇಶವು ಇದೇ. ಒಂಭತ್ತುವರೆ ಕುಲದವರಿಗೆ ಇದನ್ನು ಹಂಚಿಕೊಡಬೇಕು.
Kannada BSI Bible 2016
ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾ ಪಿಸಿ--ನೀವು ಚೀಟಿನಿಂದ ಸ್ವಾಧೀನಪಡಿಸಿಕೊಳ್ಳ ಬೇಕಾದ ದೇಶವು ಒಂಭತ್ತುವರೆ ಗೋತ್ರಗಳಿಗೆ ಕೊಡ ಬೇಕೆಂದು ಕರ್ತನು ಆಜ್ಞಾಪಿಸಿದ ದೇಶವು ಇದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕನುಸಾರವಾಗಿ ಮೋಶೆಯು ಇಸ್ರಾಯೆಲ್ಯರಿಗೆ - ನೀವು ಚೀಟುಹಾಕಿ ಹಂಚಿಕೊಳ್ಳಬೇಕೆಂದು ಯೆಹೋವನು ಆಜ್ಞಾಪಿಸಿದ ದೇಶವು ಇದೇ; ಒಂಭತ್ತುವರೆ ಕುಲದವರಿಗೆ ಇದನ್ನು ಹಂಚಿಕೊಡಬೇಕು.
Kannada Bible (KNCL) BSI 2016
ಅದಕ್ಕನುಸಾರವಾಗಿ ಮೋಶೆ ಇಸ್ರಯೇಲರಿಗೆ, “ನೀವು ಚೀಟುಹಾಕಿ ಹಂಚಿಕೊಳ್ಳಬೇಕೆಂದು ಸರ್ವೇಶ್ವರ ಆಜ್ಞಾಪಿಸಿದ ನಾಡು ಇದೇ. ಒಂಬತ್ತುವರೆ ಕುಲದವರಿಗೆ ಇದನ್ನು ಹಂಚಿಕೊಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿ, “ನೀವು ಚೀಟುಹಾಕಿ ಸ್ವಾಧೀನಪಡಿಸಿಕೊಳ್ಳಬೇಕಾದ ದೇಶವು ಒಂಬತ್ತುವರೆ ಗೋತ್ರಗಳಿಗೆ ಕೊಡಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ ದೇಶವು ಇದೇ.