Numbers 34:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿಂದ ಅದು ಅಕ್ರಬ್ಬೀಮ್ ಕಣಿವೆಗೆ ತಿರುಗಿಕೊಂಡು ಚಿನಿಗೆ ಮುಂದುವರಿಯುವುದು. ಅದರ ಪರಿಮಿತಿ ದಕ್ಷಿಣ ಕಾದೇಶ್ ಬರ್ನೇಯಾ. ಅಲ್ಲಿಂದ ಅದು ಹಚರದ್ದಾರ್‌ಗೆ ಹೋಗಿ ಅಚ್ಮೋನಿಗೆ ಮುಂದುವರಿಯುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಕ್ಷಿಣಕ್ಕೆ ತಿರುಗಿಕೊಂಡು ಅಕ್ರಬ್ಬೀಮ್ ಎಂಬ ಕಣಿವೆಯ ಮಾರ್ಗವಾಗಿ ಚಿನಿಗೆ ಬರಬೇಕು. ಅದರ ಮೂಲೆ ಕಾದೇಶ್ ಬರ್ನೇಯದ ದಕ್ಷಿಣದ ಕಡೆಯಲ್ಲಿರುವುದು. ಅಲ್ಲಿಂದ ಅದು ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು.
Kannada BSI Bible 2016
ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್‌ ದಿನ್ನೆಗೆ ತಿರುಗಿ ಜಿನ್‌ಗೆ ಹಾದು ಕಾದೇಶ್‌ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು ಅಲ್ಲಿಂದ ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಕ್ಷಿಣಕ್ಕೆ ತಿರುಗಿಕೊಂಡು ಅಕ್ರಬ್ಬೀಮ್ ಎಂಬ ಕಣಿವೆಯ ಮಾರ್ಗವಾಗಿ ಚಿನಿಗೆ ಬರಬೇಕು. ಅದರ ಮೂಲೆ ಕಾದೇಶ್ ಬರ್ನೇಯದ ದಕ್ಷಿಣ ಕಡೆಯಲ್ಲಿರಬೇಕು.
Kannada Bible (KNCL) BSI 2016
ಅದು ಅಲ್ಲಿಂದ ದಕ್ಷಿಣಕ್ಕೆ ತಿರುಗಿಕೊಂಡು ಅಕ್ರಬ್ಬೀಮ್ ಎಂಬ ಕಣಿವೆಯ ಮಾರ್ಗವಾಗಿ ಚಿನಿಗೆ ಬರುವುದು. ಅದರ ಮೂಲೆ ಕಾದೇಶ್ ಬರ್ನೆಯದ ದಕ್ಷಿಣ ಕಡೆಯಲ್ಲಿರುವುದು. ಅಲ್ಲಿಂದ ಹಚರದ್ದಾರ್, ಆಚ್ಮೋನ್ ಎಂಬ ಊರುಗಳ ಮೇಲೆ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್ ದಿನ್ನೆಗೆ ತಿರುಗಿ, ಚಿನ್‌ಗೆ ಹಾದು, ಕಾದೇಶ್ ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು, ಅಲ್ಲಿಂದ ಹಚರದ್ದಾರಿಗೆ ಹೊರಟು, ಅಚ್ಮೋನಿಗೆ ಹಾದು ಹೋಗಬೇಕು.