Numbers 35:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೊಂದವನು ನ್ಯಾಯ ವಿಚಾರಣಾಸಭೆಯ ಮುಂದೆ ನಿಂತುಕೊಳ್ಳುವುದಕ್ಕಿಂತ ಮೊದಲೇ ಕೊಲ್ಲಲ್ಪಟ್ಟವನ ಸಂಬಂಧಿಕನಿಂದ ಕೊಲ್ಲಲ್ಪಡದೆ ಸುರಕ್ಷಿತನಾಗಿರಲು ಆ ಆಶ್ರಯ ಸ್ಥಳಗಳು ನಿಮ್ಮ ಮಧ್ಯದಲ್ಲಿ ಇರಲೇಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಸಭೆಯವರಿಂದ ತೀರ್ಪು ಹೊಂದುವುದಕ್ಕಿಂತ ಮೊದಲೇ ಹತವಾದವನ ಸಮೀಪಬಂಧುವಿನಿಂದ ಸಾಯದಂತೆ ಆ ಆಶ್ರಯ ಪಟ್ಟಣಗಳು ನಿಮ್ಮೊಳಗೆ ಇರಬೇಕು.
Kannada BSI Bible 2016
ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವ ವರೆಗೂ ಸಾಯದ ಹಾಗೆ ಅವು ನಿಮಗೆ ಸೇಡು ತೀರಿಸುವವನ ದೆಸೆಯಿಂದ ಆಶ್ರಯದ ಪಟ್ಟಣಗಳಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಸಭೆಯವರಿಂದ ತೀರ್ಪುಹೊಂದುವದಕ್ಕಿಂತ ಮೊದಲೇ ಹತವಾದವನ ಸಮೀಪಬಂಧುವಿನಿಂದ ಸಾಯದಂತೆ ಆ ಆಶ್ರಯಸ್ಥಾನಗಳು ನಿಮ್ಮೊಳಗೆ ಇರಬೇಕು.
Kannada Bible (KNCL) BSI 2016
ಅಂಥವನು ಸಭೆಯವರಿಂದ ತೀರ್ಪುಹೊಂದುವುದಕ್ಕಿಂತ ಮೊದಲೇ ಹತನಾದವನ ಸಮೀಪ ಬಂಧುವಿನಿಂದ ಸಾಯದಂತೆ ಈ ಆಶ್ರಯಧಾಮಗಳು ನಿಮ್ಮಲ್ಲಿ ಇರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವವರೆಗೂ ಸೇಡು ತೀರಿಸುವವನ ದೆಸೆಯಿಂದ ಸಾಯದಂತೆ ಅವು ನಿಮಗೆ ಆಶ್ರಯದ ಪಟ್ಟಣಗಳಾಗಿರಬೇಕು.