Numbers 35:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇಸ್ರೇಲರು ತಾವು ಹೊಂದುವ ಸ್ವಾಸ್ತ್ಯದಲ್ಲಿ ಕೆಲವು ಊರುಗಳನ್ನೂ ಆ ಊರುಗಳ ಸುತ್ತಲಿರುವ ಭೂಮಿಯನ್ನೂ ಲೇವಿಯರಿಗೆ ಕೊಡಬೇಕೆಂದು ಆಜ್ಞಾಪಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಸ್ರಾಯೇಲರು ತಾವು ಹೊಂದುವ ಸ್ವತ್ತಿನಲ್ಲಿ ಕೆಲವು ಪಟ್ಟಣಗಳನ್ನೂ, ಆ ಪಟ್ಟಣಗಳ ಸುತ್ತಲಿನ ಭೂಮಿಯನ್ನೂ ಲೇವಿಯರಿಗೆ ವಾಸಕ್ಕಾಗಿ ಕೊಡಬೇಕೆಂದು ಅವರಿಗೆ ಆಜ್ಞಾಪಿಸು.
Kannada BSI Bible 2016
ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿ ಯರಿಗೆ ವಾಸಮಾಡುವದಕ್ಕೆ ಪಟ್ಟಣಗಳನ್ನು ಕೊಡ ಬೇಕು; ಪಟ್ಟಣಗಳ ಸುತ್ತಮುತ್ತಲಿರುವ ಉಪನಗರ ಗಳನ್ನು ನೀವು ಲೇವಿಯರಿಗೆ ಕೊಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ತಾವು ಹೊಂದುವ ಸ್ವಾಸ್ತ್ಯದಲ್ಲಿ ಕೆಲವು ಊರುಗಳನ್ನೂ ಆ ಊರುಗಳ ಸುತ್ತಲಿನ ಭೂವಿುಯನ್ನೂ ಲೇವಿಯರಿಗೆ ನಿವಾಸಕ್ಕಾಗಿ ಕೊಡಬೇಕೆಂದು ಅವರಿಗೆ ಆಜ್ಞಾಪಿಸು.
Kannada Bible (KNCL) BSI 2016
“ಇಸ್ರಯೇಲರು ತಾವು ಹೊಂದುವ ಸೊತ್ತಿನಲ್ಲಿ ಕೆಲವು ಊರುಗಳನ್ನು ಹಾಗು ಆ ಊರಿನ ಸುತ್ತಲಿನ ಭೂಮಿಯನ್ನು ಲೇವಿಯರಿಗೆ ನಿವಾಸಕ್ಕಾಗಿ ಕೊಡಬೇಕೆಂದು ಅವರಿಗೆ ಆಜ್ಞಾಪಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿಯರಿಗೆ ವಾಸಮಾಡುವುದಕ್ಕೆ ಕೆಲವು ಪಟ್ಟಣಗಳನ್ನು ಕೊಡಬೇಕು. ಪಟ್ಟಣಗಳ ಸುತ್ತಮುತ್ತಲಿರುವ ಹುಲ್ಲುಗಾವಲು ಪ್ರದೇಶಗಳನ್ನು ನೀವು ಲೇವಿಯರಿಗೆ ಕೊಡಬೇಕು.