Numbers 35:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ, ಅವನು ನರಹತ್ಯ ಮಾಡಿದವನೇ. ಅವನಿಗೆ ಮರಣ ಶಿಕ್ಷೆಯಾಗಬೇಕು. ಹತನಾದವನ ಸಮೀಪ ಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಲ್ಲವೆ ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ ಅವನು ನರಹತ್ಯೆಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು. ಹತವಾದವನ ಸಮೀಪಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಬೇಕು.
Kannada BSI Bible 2016
ಇಲ್ಲವೆ ಶತ್ರುತ್ವಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ; ಹೊಡೆದವನನ್ನು ನಿಜವಾಗಿ ಸಾಯಿಸಬೇಕು; ರಕ್ತ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆ ಪಾತಕನನ್ನು ಕೊಲ್ಲಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ದ್ವೇಷದಿಂದ ಕೈಯಾರೆ ಹೊಡೆಯುವದರಿಂದಾಗಲಿ ಕೊಂದರೆ ಅವನು ನರಹತ್ಯ ಮಾಡಿದವನೇ; ಅವನಿಗೆ ಮರಣ ಶಿಕ್ಷೆಯಾಗಬೇಕು. ಹತವಾದವನ ಸಮೀಪಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಲಿ.
Kannada Bible (KNCL) BSI 2016
ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ ಅವನು ಕೂಡ ನರಹತ್ಯಗಾರನೆ. ಅಂಥವನಿಗೂ ಮರಣಶಿಕ್ಷೆಯಾಗಬೇಕು. ಹತನಾದವನ ಸಮೀಪಬಂಧು ಅವನನ್ನು ಕಂಡೊಡನೆ ಕೊಲ್ಲಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಲ್ಲವೆ ಹಗೆತನ ಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ, ಹೊಡೆದವನನ್ನು ನಿಜವಾಗಿ ಸಾಯಿಸಬೇಕು. ರಕ್ತಪಾತಕ್ಕೆ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆಪಾತಕನನ್ನು ಕೊಲ್ಲಬೇಕು.