Numbers 35:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ವಾಸವಾಗಿರುವ ದೇಶವನ್ನು ಕೆಡಿಸಬಾರದು. ಕೊಲೆಯು ದೇಶವನ್ನು ಕೆಡಿಸುತ್ತದೆ. ಕೊಲೆಯು ನಡೆಯಲ್ಪಟ್ಟಿರುವ ದೇಶಕ್ಕೆ ಕೊಲೆಗಾರನ ರಕ್ತವೇ ಹೊರತು ಬೇರೆ ಯಾವ ಈಡೂ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇಶವು ಅಪವಿತ್ರವಾಗುವುದಿಲ್ಲ. ರಕ್ತವು ದೇಶವನ್ನು ಅಪವಿತ್ರ ಮಾಡುವುದು. ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.
Kannada BSI Bible 2016
ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇಶವು ಅಪವಿತ್ರವಾಗುವದಿಲ್ಲ. ರಕ್ತವು ದೇಶವನ್ನು ಅಪವಿತ್ರ ಮಾಡುವದಷ್ಟೆ. ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.
Kannada Bible (KNCL) BSI 2016
“ನೀವು ಈ ಪ್ರಕಾರ ನಡೆದುಕೊಂಡರೆ ನಿಮ್ಮ ನಾಡು ಅಪವಿತ್ರವಾಗುವುದಿಲ್ಲ. ರಕ್ತಪಾತವು ನಾಡನ್ನು ಅಪವಿತ್ರಗೊಳಿಸುತ್ತದೆ. ಅದಕ್ಕೆ ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಹೀಗೆ ನೀವು ವಾಸಿಸುವ ದೇಶವನ್ನು ನೀವು ಅಪವಿತ್ರ ಮಾಡಬೇಡಿರಿ. ಏಕೆಂದರೆ ದೇಶವನ್ನು ಅಪವಿತ್ರ ಮಾಡುವಂಥಾದ್ದು ರಕ್ತವೇ. ಹತರಾದವರ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.