Numbers 35:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ವಾಸಿಸುವ ದೇಶವನ್ನು ನೀವು ಅಶುದ್ಧಮಾಡಬಾರದು, ಯಾಕೆಂದರೆ ಯೆಹೋವನಾದ ನಾನೇ ಇಸ್ರೇಲರೊಂದಿಗೆ ವಾಸಿಸುತ್ತೇನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ವಾಸಿಸುವ ದೇಶವನ್ನು ಅಪವಿತ್ರಮಾಡಬಾರದು. ಯೆಹೋವನೆಂಬ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ.’”
Kannada BSI Bible 2016
ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ವಾಸಿಸುವ ದೇಶವನ್ನು ಅಪವಿತ್ರಮಾಡಬಾರದು; ಯೆಹೋವನೆಂಬ ನಾನೇ ಇಸ್ರಾಯೇಲ್ಯರ ನಡುವೆ ಆ ದೇಶದಲ್ಲಿ ವಾಸಿಸುತ್ತೇನಲ್ಲಾ.
Kannada Bible (KNCL) BSI 2016
ನೀವು ವಾಸಮಾಡುವ ನಾಡನ್ನು ಅಪವಿತ್ರ ಮಾಡಬೇಡಿ. ಸರ್ವೇಶ್ವರನೆಂಬ ನಾನೇ ಇಸ್ರಯೇಲರ ನಡುವೆ ಆ ನಾಡಿನಲ್ಲಿ ವಾಸಿಸುತ್ತೇನೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧ ಮಾಡಬೇಡಿರಿ. ಏಕೆಂದರೆ ನಾನು ಅದರೊಳಗೆ ವಾಸಿಸುತ್ತೇನೆ. ಯೆಹೋವ ದೇವರಾಗಿರುವ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ,’ ” ಎಂದರು.