Numbers 35:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪಟ್ಟಣದ ಹೊರಗೆ ಪ್ರತಿಯೊಂದು ದಿಕ್ಕಿನಲ್ಲಿ ಎರಡು ಸಾವಿರ ಮೊಳಗಳನ್ನು ಅಳೆದು ಪಟ್ಟಣಕ್ಕೆ ಗಡಿಯನ್ನು ಗೊತ್ತುಪಡಿಸಬೇಕು; ಪೂರ್ವದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು; ದಕ್ಷಿಣದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು; ಪಶ್ಚಿಮದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು ಮತ್ತು ಉತ್ತರದಿಕ್ಕಿನಲ್ಲಿ ಎರಡು ಸಾವಿರ ಮೊಳಗಳು. ಇವುಗಳ ಮಧ್ಯದಲ್ಲಿ ಪಟ್ಟಣವಿರಬೇಕು. ಅದು ಅವರ ಪಟ್ಟಣಗಳಿಗೆ ಹುಲ್ಲುಗಾವಲುಗಳಾಗಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಪಟ್ಟಣದ ಹೊರಗಡೆ ಪೂರ್ವ ದಿಕ್ಕಿನಲ್ಲಿ ಎರಡು ಸಾವಿರ ಮೊಳ, ದಕ್ಷಿಣದಲ್ಲಿ ಎರಡು ಸಾವಿರ ಮೊಳ, ಪಶ್ಚಿಮದಲ್ಲಿ ಎರಡು ಸಾವಿರ ಮೊಳ, ಉತ್ತರದಲ್ಲಿ ಎರಡು ಸಾವಿರ ಮೊಳ, ಅಳೆಯಬೇಕು. ಮಧ್ಯದಲ್ಲಿ ಪಟ್ಟಣಗಳಿರಬೇಕು. ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು.
Kannada BSI Bible 2016
ನೀವು ಪಟ್ಟಣದ ಹೊರಗೆ ಪೂರ್ವ ಕಡೆಯಲ್ಲಿ ಎರಡು ಸಾವಿರ ಮೊಳ, ದಕ್ಷಿಣ ಕಡೆಯಲ್ಲಿ ಎರಡು ಸಾವಿರ ಮೊಳ, ಪಶ್ಚಿಮ ಕಡೆಯಲ್ಲಿ ಎರಡು ಸಾವಿರ ಮೊಳ, ಉತ್ತರ ಕಡೆಯಲ್ಲಿ ಎರಡು ಸಾವಿರ ಮೊಳ ಅಳೆಯಬೇಕು; ಮಧ್ಯದಲ್ಲಿ ಪಟ್ಟಣವಿರಬೇಕು; ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಊರಿನ ಹೊರಗಡೆ ನಾಲ್ಕು ದಿಕ್ಕುಗಳಲ್ಲಿಯೂ ಎರಡೆರಡು ಸಾವಿರ ಮೊಳಗಳಷ್ಟು ಉದ್ದವಾಗಿ ಮೇರೆಗಳನ್ನು ಗೊತ್ತುಮಾಡಬೇಕು; ಆ ಭೂವಿುಯ ನಡುವೆಯಲ್ಲಿ ಊರು ಇರಬೇಕು. ವಿುಕ್ಕದ್ದು ಹುಲ್ಲುಗಾವಲು.
Kannada Bible (KNCL) BSI 2016
“ಊರಿನ ಹೊರಗಡೆ ನಾಲ್ಕು ದಿಕ್ಕುಗಳಲ್ಲೂ ಎರಡೆರಡು ಸಾವಿರ ಮೊಳಗಳಷ್ಟು ದೂರದಲ್ಲಿ ಎಲ್ಲೆಗಳನ್ನು ಗೊತ್ತುಮಾಡಬೇಕು. ಆ ಭೂಮಿಯ ನಡುವೆ ಊರಿರಬೇಕು. ಮಿಕ್ಕದ್ದು ಹುಲ್ಲುಗಾವಲಾಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಪಟ್ಟಣದ ಹೊರಗೆ ಪೂರ್ವದಲ್ಲಿ ಎರಡು ಸಾವಿರ ಮೊಳ, ದಕ್ಷಿಣದಲ್ಲಿ ಎರಡು ಸಾವಿರ ಮೊಳ, ಪಶ್ಚಿಮದಲ್ಲಿ ಎರಡು ಸಾವಿರ ಮೊಳ, ಉತ್ತರದಲ್ಲಿ ಎರಡು ಸಾವಿರ ಮೊಳ ಅಳೆಯಬೇಕು. ಮಧ್ಯದಲ್ಲಿ ಪಟ್ಟಣವಿರಬೇಕು. ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು.