Numbers 36:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೆರಿಕೊ ಪಟ್ಟಣದ ಎದುರಾಗಿರುವ ಜೋರ್ಡನ್ ನದಿಯ ಬಳಿಯಲ್ಲಿರುವ ಮೋವಾಬಿನ ಬಯಲಿನಲ್ಲಿ ಯೆಹೋವನು ಇಸ್ರೇಲರಿಗೆ ಮೋಶೆಯ ಮೂಲಕ ಕೊಟ್ಟ ಆಜ್ಞೆಗಳೂ ವಿಧಿಗಳೂ ಇವೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ.
Kannada BSI Bible 2016
ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಗಳೂ ನ್ಯಾಯಗಳೂ ಇವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೊರ್ದನ್ ಹೊಳೆಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಮೂಲಕ ಇಸ್ರಾಯೇಲ್ಯರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ.
Kannada Bible (KNCL) BSI 2016
ಜೋರ್ಡನ್ ನದಿಯ ತೀರದಲ್ಲಿ ಜೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬಯಲುಗಳಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲರಿಗೆ ಆಜ್ಞಾಪಿಸಿದ ಆಜ್ಞೆಗಳೂ, ನ್ಯಾಯಗಳೂ ಇವೇ.