Numbers 36:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು, “ಸ್ವಾಮೀ, ಚೀಟುಹಾಕಿ ಇಸ್ರೇಲರಿಗೆ ದೇಶವನ್ನು ಹಂಚಿಕೊಡಬೇಕೆಂದು ಯೆಹೋವನು ನಿಮಗೆ ಆಜ್ಞಾಪಿಸಿದ್ದಾನೆ. ಅದಲ್ಲದೆ ನಮ್ಮ ಸಂಬಂಧಿಕನಾದ ಚಲ್ಪಹಾದನ ಭೂಮಿಯನ್ನು ಅವನ ಹೆಣ್ಣುಮಕ್ಕಳಿಗೆ ಕೊಡಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ದೇಶವನ್ನು ಚೀಟುಹಾಕಿ ಇಸ್ರಾಯೇಲರಿಗೆ ಹಂಚಿಕೊಡಬೇಕೆಂದು ಯೆಹೋವನು ಒಡೆಯನಿಗೆ ಆಜ್ಞಾಪಿಸಿ ತರುವಾಯ ನಮ್ಮ ಸ್ವಕುಲದವನಾದ ಚಲ್ಪಹಾದನಿಗೆ ಬರತಕ್ಕ ಸ್ವತ್ತನ್ನು ಅವನ ಹೆಣ್ಣುಮಕ್ಕಳಿಗೆ ಕೊಡಬೇಕು ಎಂದು ಅಪ್ಪಣೆಮಾಡಿದನು.
Kannada BSI Bible 2016
ಇಸ್ರಾಯೇಲ್ ಮಕ್ಕಳ ಮುಖ್ಯ ಯಜಮಾನರಾಗಿರುವ ಪ್ರಧಾನರ ಮುಂದೆ ಯೂ ಮಾತನಾಡಿ--ಇಸ್ರಾಯೇಲ್ ಮಕ್ಕಳಿಗೆ ಚೀಟಿ ನಿಂದ ಸ್ವಾಸ್ತ್ಯಕ್ಕಾಗಿ ದೇಶವನ್ನು ಕೊಡುವದಕ್ಕೆ ಕರ್ತನು ನಮ್ಮ ಒಡೆಯನಿಗೆ ಆಜ್ಞಾಪಿಸಿದನು; ನಮ್ಮ ಸಹೋದರ ನಾದ ಚಲ್ಪಹಾದನ ಸ್ವಾಸ್ತ್ಯವನ್ನು ಅವನ ಕುಮಾರ್ತೆ ಯರಿಗೆ ಕೊಡುವದಕ್ಕೆ ನಮ್ಮ ಒಡೆಯನು ಕರ್ತನಿಂದ ಆಜ್ಞೆ ಹೊಂದಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇಶವನ್ನು ಚೀಟುಹಾಕಿ ಇಸ್ರಾಯೇಲ್ಯರಿಗೆ ಹಂಚಿಕೊಡಬೇಕೆಂದು ಯೆಹೋವನು ಒಡೆಯನಿಗೆ ಆಜ್ಞಾಪಿಸಿ ತರುವಾಯ ನಮ್ಮ ಸ್ವಕುಲದವನಾದ ಚಲ್ಪಹಾದನಿಗೆ ಬರತಕ್ಕ ಸ್ವಾಸ್ತ್ಯವನ್ನು ಅವನ ಹೆಣ್ಣುಮಕ್ಕಳಿಗೆ ಕೊಡಬೇಕೆಂದೂ ಅಪ್ಪಣೆ ಮಾಡಿದನಷ್ಟೆ.
Kannada Bible (KNCL) BSI 2016
“ಚೀಟುಹಾಕಿ ನಾಡನ್ನು ಇಸ್ರಯೇಲರಿಗೆ ಹಂಚಿಕೊಡಬೇಕೆಂದು ಸರ್ವೇಶ್ವರ ಸ್ವಾಮಿ ಒಡೆಯರಾದ ತಮಗೆ ಆಜ್ಞಾಪಿಸಿದರು. ತರುವಾಯ ನಮ್ಮ ಸ್ವಕುಲದವನಾದ ಚಲ್ಪಹಾದನಿಗೆ ಬರತಕ್ಕ ಸೊತ್ತನ್ನು ಅವನ ಹೆಣ್ಣು ಮಕ್ಕಳಿಗೆ ಕೊಡಬೇಕೆಂದು ಅಪ್ಪಣೆ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಚೀಟುಹಾಕಿ ನಾಡನ್ನು ಇಸ್ರಾಯೇಲರಿಗೆ ಸೊತ್ತಾಗಿ ಕೊಡುವುದಕ್ಕೆ ಯೆಹೋವ ದೇವರು ನಮ್ಮ ಒಡೆಯನಾದ ನಿನಗೆ ಆಜ್ಞಾಪಿಸಿದರು. ನಮ್ಮ ಸಹೋದರನಾದ ಚಲ್ಪಹಾದನ ಸೊತ್ತನ್ನು ಅವನ ಪುತ್ರಿಯರಿಗೆ ಕೊಡಬೇಕೆಂದು ದೇವರಿಂದ ಅಪ್ಪಣೆಯಾಗಿತ್ತು.