Numbers 36:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದಕಾರಣ ಚಲ್ಫಹಾದನ ಹೆಣ್ಣುಮಕ್ಕಳು ಮದುವೆಯಾಗುವುದಾದರೆ ತಮ್ಮ ತಂದೆಯ ಗೋತ್ರಕ್ಕೆ ಸಂಬಂಧಿಸಿದ ಯಾರನ್ನು ಬೇಕಾದರೂ ಮದುವೆಯಾಗಬಹುದೆಂದು ಯೆಹೋವನು ಆಜ್ಞಾಪಿಸಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಯೆಹೋವನು ಚಲ್ಪಹಾದನ ಹೆಣ್ಣುಮಕ್ಕಳ ವಿಷಯವಾಗಿ ಅಜ್ಞಾಪಿಸಿದ್ದೇನೆಂದರೆ, ‘ತಮ್ಮ ಕುಲದ ಕುಟುಂಬಗಳಲ್ಲಿ ಮಾತ್ರವೇ ತಮಗೆ ಇಷ್ಟಬಂದವರನ್ನು ಮದುವೆಮಾಡಿಕೊಳ್ಳಬೇಕು’ ಎಂಬುದೇ.
Kannada BSI Bible 2016
ಕರ್ತನು ಚಲ್ಪಹಾದನ ಕುಮಾರ್ತೆಯರ ವಿಷಯದಲ್ಲಿ ಆಜ್ಞಾಪಿಸಿದ ಮಾತು ಏನಂದರೆ--ಅವರು ತಮ್ಮ ಮನಸ್ಸು ಬಂದವರಿಗೆ ಮದುವೆಮಾಡಿಕೊಳ್ಳಲಿ; ಆದರೆ ತಮ್ಮ ತಂದೆಯ ಕುಟುಂಬದ ಗೋತ್ರದ ವರಿಗೆ ಮಾತ್ರ ಮದುವೆಮಾಡಿಕೊಳ್ಳಬಹುದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಚಲ್ಪಹಾದನ ಹೆಣ್ಣುಮಕ್ಕಳು ತಮ್ಮ ಕುಲದ ಕುಟುಂಬಗಳಲ್ಲಿ ಮಾತ್ರವೇ ತಮಗೆ ಇಷ್ಟಬಂದವರನ್ನು ಮದುವೆ ಮಾಡಿಕೊಳ್ಳಬೇಕೆಂದು ಯೆಹೋವನು ಅಪ್ಪಣೆ ಮಾಡಿದ್ದಾನೆ.
Kannada Bible (KNCL) BSI 2016
ಆದಕಾರಣ ಚಲ್ಪಹಾದನ ಹೆಣ್ಣುಮಕ್ಕಳು ತಮ್ಮ ಕುಲದ ಕುಟುಂಬಗಳಲ್ಲಿ ಮಾತ್ರವೇ ತಮಗೆ ಇಷ್ಟಬಂದವರನ್ನು ಮದುವೆಮಾಡಿಕೊಳ್ಳಬೇಕೆಂದು ಸರ್ವೇಶ್ವರ ಅಪ್ಪಣೆಮಾಡಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಚಲ್ಪಹಾದನ ಪುತ್ರಿಯರ ವಿಷಯದಲ್ಲಿ ಆಜ್ಞಾಪಿಸಿದ ಮಾತು ಏನೆಂದರೆ: ಅವರು ತಮ್ಮ ಮನಸ್ಸು ಬಂದವರೊಂದಿಗೆ ಮದುವೆಮಾಡಿಕೊಳ್ಳಲಿ, ಆದರೆ ತಮ್ಮ ತಂದೆಯ ಕುಟುಂಬದ ಗೋತ್ರದವರಿಗೆ ಮಾತ್ರ ಮದುವೆ ಮಾಡಿಕೊಳ್ಳಬಹುದು.