Numbers 36:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗಬಾರದು. ಇಸ್ರೇಲರೆಲ್ಲರೂ ತಮ್ಮ ಪೂರ್ವಿಕರಿಂದ ಸ್ವಾಸ್ತ್ಯವಾಗಿ ಪಡೆದುಕೊಂಡ ತಮ್ಮ ಗೋತ್ರದ ಭೂಮಿಯನ್ನು ತಮ್ಮ ಸ್ವಾಧೀನದಲ್ಲೇ ಇಟ್ಟುಕೊಂಡಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗಬಾರದು. ಇಸ್ರಾಯೇಲರೆಲ್ಲರೂ ತಮ್ಮತಮ್ಮ ಕುಲಗಳ ಸ್ವತ್ತನ್ನು ಹೊಂದಿಕೊಂಡೇ ಇರಬೇಕು.
Kannada BSI Bible 2016
ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯವು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ತಿರುಗಿಸಲ್ಪಡ ಬಾರದು. ಇಸ್ರಾಯೇಲ್ ಮಕ್ಕಳು ಒಬ್ಬೊಬ್ಬನು ತನ್ನ ಪಿತೃಗಳ ಗೋತ್ರದ ಸ್ವಾಸ್ತ್ಯಕ್ಕೆ ಹೊಂದಿ ಕೊಂಡಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗಬಾರದು. ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ಕುಲಗಳ ಸ್ವಾಸ್ತ್ಯವನ್ನು ಹೊಂದಿಕೊಂಡೇ ಇರಬೇಕು.
Kannada Bible (KNCL) BSI 2016
ಇಸ್ರಯೇಲರ ಯಾವ ಸೊತ್ತೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗಬಾರದು. ಇಸ್ರಯೇಲರೆಲ್ಲರು ತಮ್ಮ ತಮ್ಮ ಕುಲಗಳ ಸೊತ್ತನ್ನು ತಾವೇ ಹೊಂದಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರ ಸೊತ್ತು ಒಂದು ಗೋತ್ರದಿಂದ ಮತ್ತೊಂದು ಗೋತ್ರದ ಕೈಗೆ ಹೋಗಬಾರದು. ಏಕೆಂದರೆ ಇಸ್ರಾಯೇಲರು, ಒಬ್ಬೊಬ್ಬನು ತನ್ನ ಪಿತೃಗಳ ಗೋತ್ರದ ಸೊತ್ತನ್ನು ತಾನೇ ಹೊಂದಿರಬೇಕು.