Numbers 4:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಅವರು ವೇದಿಕೆಯಲ್ಲಿ ಆರಾಧನೆಗಾಗಿ ಉಪಯೋಗಿಸಲ್ಪಡುವ ಎಲ್ಲಾ ವಸ್ತುಗಳನ್ನು ಒಟ್ಟಾಗಿ ಸೇರಿಸಬೇಕು. ಅವುಗಳು ಯಾವುವೆಂದರೆ, ಅಗ್ಗಿಷ್ಟಿಗೆಗಳು, ಮುಳ್ಳುಚಮಚಗಳು, ಸಲಿಕೆಗಳು ಮತ್ತು ಬೋಗುಣಿಗಳು. ಅವರು ಇವುಗಳನ್ನು ತಾಮ್ರದ ವೇದಿಕೆಯ ಮೇಲೆ ಇಡಬೇಕು. ಬಳಿಕ ಅವರು ಶ್ರೇಷ್ಠವಾದ ತೊಗಲಿನ ಹೊದಿಕೆಯನ್ನು ಇವುಗಳಿಗೆಲ್ಲ ಹೊದಿಸಿ, ಹೊರುವ ಕೋಲುಗಳನ್ನು ವೇದಿಕೆಯ ಬಳೆಗಳಲ್ಲಿ ಸೇರಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಸಂಬಂಧಪಟ್ಟ ಅಗ್ಗಿಷ್ಟಿಕೆಗಳು, ಮುಳ್ಳುಗಳು, ಸಲಿಕೆಗಳು, ಬೋಗುಣಿಗಳು ಮುಂತಾದ ಉಪಕರಣಗಳನ್ನೆಲ್ಲಾ ಮೇಲೆ ಇಟ್ಟು ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು.
Kannada BSI Bible 2016
ಸೇವೆ ಮಾಡುವ ಎಲ್ಲಾ ವಸ್ತುಗಳನ್ನೂ ಅಗ್ನಿಪಾತ್ರೆಗಳನ್ನೂ ಮುಳ್ಳುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಬಲಿಪೀಠದ ಎಲ್ಲಾ ವಸ್ತುಗಳನ್ನೂ ಅದರ ಮೇಲಿಟ್ಟು ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹಾಕಿ ಅದರ ಕೋಲುಗಳನ್ನು ಇಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಸಂಬಂಧಪಟ್ಟ ಅಗ್ಗಿಷ್ಟಿಗೆಗಳು, ಮುಳ್ಳುಗಳು, ಸಲಿಕೆಗಳು, ಬೋಗುಣಿಗಳು ಮುಂತಾದ ಉಪಕರಣಗಳನ್ನೆಲ್ಲಾ ಮೇಲೆ ಇಟ್ಟು ಕಡಲುಹಂದಿಯ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು.
Kannada Bible (KNCL) BSI 2016
ಅದಕ್ಕೆ ಸಂಬಂಧಪಟ್ಟ ಅಗ್ಗಿಷ್ಠಿಕೆಗಳು, ಮುಳ್ಳುಗಳು, ಸಲಿಕೆಗಳು ಹಾಗೂ ಬೋಗುಣಿಗಳು ಮುಂತಾದ ಉಪಕರಣಗಳನ್ನೆಲ್ಲಾ ಮೇಲೆ ಇಟ್ಟು, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಮೇಲೆ ಸೇವೆ ಮಾಡುವ ಎಲ್ಲಾ ಸಲಕರಣೆಗಳನ್ನು, ಅಗ್ನಿ ಪಾತ್ರೆಗಳನ್ನು, ಮುಳ್ಳುಗಳನ್ನು, ಸಲಿಕೆಗಳನ್ನು, ಬೋಗುಣಿಗಳನ್ನು, ಬಲಿಪೀಠದ ಎಲ್ಲಾ ಸಲಕರಣೆಗಳನ್ನು ಅದರ ಮೇಲಿಟ್ಟು, ಕಡಲುಹಂದಿಯ ಚರ್ಮಗಳ ಹೊದಿಕೆಯನ್ನು ಹಾಕಿ, ಹೊರುವ ಕೋಲುಗಳನ್ನು ಇಡಬೇಕು.