Numbers 4:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಮಹಾಯಾಜಕನಾದ ಆರೋನನ ಮಗನಾದ ಎಲ್ಲಾಜಾರನು ಇಡೀ ಪವಿತ್ರ ಗುಡಾರವನ್ನು ಮತ್ತು ಎಲ್ಲಾ ಪವಿತ್ರಸ್ಥಳವನ್ನು ಮತ್ತು ಅದರೊಳಗಿರುವ ಎಲ್ಲಾ ಪಾತ್ರೆಗಳನ್ನು ನೋಡಿಕೊಳ್ಳುವ ಜವಾಬ್ದಾರಿ ಹೊಂದಿದ್ದಾನೆ. ದೀಪದ ಎಣ್ಣೆಗೂ ಪರಿಮಳಧೂಪಕ್ಕೂ ದೈನಂದಿನ ಧಾನ್ಯಸಮರ್ಪಣೆಗೂ ಅಭಿಷೇಕತೈಲಕ್ಕೂ ಅವನು ಜವಾಬ್ದಾರನಾಗಿದ್ದಾನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ದೀಪದ ಎಣ್ಣೆಯನ್ನೂ, ಪರಿಮಳಧೂಪವನ್ನೂ, ನಿತ್ಯವಾಗಿ ನೈವೇದ್ಯಮಾಡುವ ಧಾನ್ಯದ್ರವ್ಯವನ್ನೂ, ಅಭಿಷೇಕತೈಲವನ್ನೂ ತನ್ನ ವಶದಲ್ಲಿ ಇಟ್ಟುಕೊಳ್ಳಬೇಕು. ಅದಲ್ಲದೆ ದೇವದರ್ಶನದ ಗುಡಾರದ ಎಲ್ಲಾ ಭಾಗಗಳೂ ಅದರಲ್ಲಿಯೂ ಅದರ ಪಾತ್ರೆಗಳಲ್ಲಿಯೂ ಇರುವ ಸಮಸ್ತ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.”
Kannada BSI Bible 2016
ಯಾಜಕನಾದ ಆರೋನನ ಮಗನಾದ ಎಲ್ಲಾಜಾ ರನ ಕೆಲಸ ಯಾವದಂದರೆ: ದೀಪದ ಎಣ್ಣೆಯೂ ಸುಗಂಧ ಧೂಪವೂ ನಿತ್ಯದ ಆಹಾರ ಸಮರ್ಪಣೆಯೂ ಅಭಿಷೇಕದ ತೈಲವೂ ಸಮಸ್ತಗುಡಾರವೂ ಅದರ ಲ್ಲಿರುವ ಸಕಲವೂ ಪರಿಶುದ್ಧ ಸ್ಥಳದಲ್ಲಿಯೂ ಅದರ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ದೀಪದ ಎಣ್ಣೆಯನ್ನೂ ಪರಿಮಳಧೂಪವನ್ನೂ ನಿತ್ಯವಾಗಿ ನೈವೇದ್ಯ ಮಾಡುವ ಧಾನ್ಯದ್ರವ್ಯವನ್ನೂ ಅಭೀಷೇಕ ತೈಲವನ್ನೂ ತನ್ನ ವಶದಲ್ಲಿ ಇಟ್ಟುಕೊಳ್ಳಬೇಕು. ಅದಲ್ಲದೆ ದೇವದರ್ಶನದ ಗುಡಾರದ ಎಲ್ಲಾ ಭಾಗಗಳೂ ಅದರಲ್ಲಿಯೂ ಅದರ ಪಾತ್ರೆಗಳಲ್ಲಿಯೂ ಇರುವ ಸಮಸ್ತ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.
Kannada Bible (KNCL) BSI 2016
ಮಹಾಯಾಜಕ ಆರೋನನ ಮಗ ಎಲ್ಲಾಜಾರನು ದೀಪದ ಎಣ್ಣೆಯನ್ನು, ಪರಿಮಳ ಧೂಪವನ್ನು, ಅನುದಿನ ನೈವೇದ್ಯ ಮಾಡುವ ಧಾನ್ಯದ್ರವ್ಯಗಳನ್ನು ಹಾಗೂ ಅಭಿಷೇಕ ತೈಲವನ್ನು ತನ್ನ ವಶದಲ್ಲೇ ಇಟ್ಟುಕೊಳ್ಳಬೇಕು. ದೇವದರ್ಶನದ ಗುಡಾರದ ಎಲ್ಲ ಭಾಗಗಳು, ಅದರಲ್ಲಿರುವ ಸಮಸ್ತ ವಸ್ತುಗಳು ಪಾತ್ರೆಪರಿಕರಗಳು ಹಾಗೂ ಅವುಗಳಲ್ಲಿರುವುದೆಲ್ಲವೂ ಅವನ ಮೇಲ್ವಿಚಾರಣೆಯಲ್ಲಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯಾಜಕನಾದ ಆರೋನನ ಮಗ ಎಲಿಯಾಜರನ ಕೆಲಸ ಯಾವುದೆಂದರೆ, ದೀಪದ ಎಣ್ಣೆಯೂ, ಸುಗಂಧ ಧೂಪವೂ, ನಿತ್ಯದ ಧಾನ್ಯ ಸಮರ್ಪಣೆಯೂ, ಅಭಿಷೇಕದ ತೈಲವೂ, ಸಮಸ್ತ ಗುಡಾರವೂ, ಅದರಲ್ಲಿರುವ ಸಕಲವೂ, ಪರಿಶುದ್ಧ ಸ್ಥಳದಲ್ಲಿರುವ ಅದರ ಸಾಮಗ್ರಿಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.”