Numbers 4:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಮಹಾ ಪರಿಶುದ್ಧ ವಸ್ತುಗಳ ಹತ್ತಿರ ಬಂದಾಗ ಸಾಯದಂತೆ ನೀವು ಅವರ ವಿಷಯದಲ್ಲಿ ಮಾಡಬೇಕಾದದ್ದೇನೆಂದರೆ, ಆರೋನನೂ ಅವನ ಪುತ್ರರೂ ಒಳಗೆ ಬಂದು, ಪ್ರತಿಯೊಬ್ಬ ಕೆಹಾತ್ಯನು ಮಾಡಬೇಕಾದ ಕೆಲಸವನ್ನು ಮತ್ತು ಹೊತ್ತುಕೊಂಡು ಹೋಗಬೇಕಾದದ್ದನ್ನು ತೋರಿಸಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಮಹಾಪರಿಶುದ್ಧ ವಸ್ತುಗಳ ಹತ್ತಿರಕ್ಕೆ ಬಂದು ಸಾಯದಂತೆ ನೀವು ಅವರ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕು.
Kannada BSI Bible 2016
ಆದರೆ ಅವರು ಅತಿ ಪರಿಶುದ್ಧವಾ ದವುಗಳನ್ನು ಸವಿಾಪಿಸುವಾಗ ಅವರು ಸಾಯದೆ ಬದುಕುವ ಹಾಗೆ ಅವರಿಗೆ ಮಾಡಬೇಕಾದದ್ದೇ ನೆಂದರೆ--ಆರೋನನೂ ಅವನ ಕುಮಾರರೂ ಒಳಗೆ ಪ್ರವೇಶಿಸಿ ಅವರಲ್ಲಿ ಒಬ್ಬೊಬ್ಬನನ್ನು ಅವನ ಕೆಲಸಕ್ಕೂ ಅವನ ಹೊರೆಗೂ ನೇಮಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಮಹಾಪರಿಶುದ್ಧವಸ್ತುಗಳ ಹತ್ತಿರಕ್ಕೆ ಬರುವಾಗ ಸಾಯದಂತೆ ನೀವು ಅವರ ವಿಷಯದಲ್ಲಿ ಮಾಡಬೇಕಾದದ್ದೇನಂದರೆ - ಆರೋನನೂ ಅವನ ಮಕ್ಕಳೂ ಒಳಗೆ ಬಂದು ಅವರವರ ಕೆಲಸಗಳನ್ನೂ ಅವರವರ ಹೊರೆಗಳನ್ನೂ ಗೊತ್ತುಮಾಡಬೇಕು.
Kannada Bible (KNCL) BSI 2016
ಪರಮ ಪವಿತ್ರವಾದ ವಸ್ತುಗಳ ಹತ್ತಿರಕ್ಕೆ ಬರುವಾಗ ಅವರು ಸಾಯದಂತೆ ಎಚ್ಚರಿಕೆ ವಹಿಸಿರಿ. ಆರೋನನು ಮತ್ತು ಅವನ ಮಕ್ಕಳು ಒಳಗೆ ಬಂದು ಅವರವರ ಕೆಲಸಗಳನ್ನು ಹೊರಬೇಕಾದ ಹೊರೆಗಳನ್ನು ಗೊತ್ತುಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಮಹಾಪರಿಶುದ್ಧ ವಸ್ತುಗಳ ಸಮೀಪಕ್ಕೆ ಬರುವಾಗ, ಅವರು ಸಾಯದೆ ಬದುಕುವ ಹಾಗೆ ಹೀಗೆ ಎಚ್ಚರಿಕೆ ವಹಿಸಬೇಕು: ಆರೋನನೂ ಅವನ ಪುತ್ರರೂ ಒಳಗೆ ಪ್ರವೇಶಿಸಿ, ಅವರಲ್ಲಿ ಒಬ್ಬೊಬ್ಬನನ್ನು ಅವನ ಕೆಲಸಕ್ಕೂ ಅವನ ಹೊರೆಯನ್ನೂ ನೇಮಿಸಬೇಕು.