Numbers 4:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಲ್ಲವಾದರೆ, ಕೆಹಾತ್ಯರು ಒಳಗೆ ಬಂದು ಪರಿಶುದ್ಧವಸ್ತುಗಳನ್ನು ಮುಟ್ಟುವರು. ಆ ಮಹಾ ಪರಿಶುದ್ಧವಸ್ತುಗಳನ್ನು ಅವರು ಒಂದು ಕ್ಷಣ ಮುಟ್ಟಿದರೂ ಸಾಯುತ್ತಾರೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಹಾತ್ಯರು ಒಳಗೆ ಬಂದು, ಒಂದು ಕ್ಷಣವು ಆ ಪರಿಶುದ್ಧ ವಸ್ತುಗಳನ್ನು ನೋಡಬಾರದು; ನೋಡಿದರೆ ಸತ್ತೇ ಹೋಗುವರು. ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಪ್ರವೇಶಿಸಿ ಅವರ ಕೆಲಸಗಳನ್ನು ಅವರವರ ಹೊರೆಗಳನ್ನೂ ಅವರಿಗೆ ನೇಮಿಸಬೇಕು” ಎಂದನು.
Kannada BSI Bible 2016
ಆದರೆ ಅವರು ಸಾಯದ ಹಾಗೆ ಪರಿಶುದ್ಧವಾದವುಗಳನ್ನು ನೋಡಲು ಒಳಗೆ ಹೋಗಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಹಾತ್ಯರೇ ಒಳಗೆ ಬಂದು ಒಂದು ಕ್ಷಣವಾದರೂ ಆ ಪರಿಶುದ್ಧವಸ್ತುಗಳನ್ನು ನೋಡಬಾರದು; ನೋಡಿದರೆ ಸತ್ತಾರು.
Kannada Bible (KNCL) BSI 2016
ಕೆಹಾತ್ಯರೇ ಒಳಗೆ ಬಂದು, ಒಂದು ಕ್ಷಣ ಮಾತ್ರವೂ ಆ ಪವಿತ್ರ ವಸ್ತುಗಳನ್ನು ನೋಡದಿರಲಿ; ನೋಡಿ ಸಾಯದಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಕೊಹಾತ್ಯರು ದೇವದರ್ಶನದ ಗುಡಾರದ ಒಳಗೆ ಬಂದು, ಒಂದು ಕ್ಷಣವೂ ಆ ಪವಿತ್ರ ವಸ್ತುಗಳನ್ನು ನೋಡಬಾರದು, ನೋಡಿ ಸಾವನ್ನಪ್ಪದಿರಲಿ.”