Numbers 4:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀನು ಗೇರ್ಷೋನ್ಯರನ್ನು ಕುಟುಂಬಗಳಿಗನುಸಾರವಾಗಿ ಮತ್ತು ಕುಲಗಳಿಗನುಸಾರವಾಗಿ ಲೆಕ್ಕಿಸು. ಅಲ್ಲದೆ ದೇವದರ್ಶನಗುಡಾರದ ಸೇವೆಯನ್ನು ಮಾಡಲು ಯೋಗ್ಯರಾದ ಗಂಡಸರನ್ನು ಪಟ್ಟಿಮಾಡು. ಅವರ ವಯಸ್ಸು ಮೂವತ್ತರಿಂದ ಐವತ್ತು ವರ್ಷದೊಳಗಿರಬೇಕು. (Verses 22-23)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಗೇರ್ಷೋನ್ಯರ ಗೋತ್ರಕುಟುಂಬಗಳ ಪ್ರಕಾರ ಎಣಿಕೆಮಾಡಬೇಕು.
Kannada BSI Bible 2016
ಗೇರ್ಷೋನನ ಕುಮಾರರ ಲೆಕ್ಕವನ್ನು ಸಹ ಅವರ ತಂದೆ ಮನೆಗಳ ಪ್ರಕಾರವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ತೆಗೆದುಕೊಳ್ಳ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಗೇರ್ಷೋನ್ಯರಲ್ಲಿ ಯಾರಾರು ಮೂವತ್ತರಿಂದ ಐವತ್ತು ವರುಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವಕಮಂಡಲಿಗೆ ಸೇರತಕ್ಕವರಾಗಿದ್ದಾರೋ ಅವರನ್ನು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.
Kannada Bible (KNCL) BSI 2016
“ನೀನು ಗೇರ್ಷೋನ್ಯರನ್ನು ಲೆಕ್ಕಿಸಬೇಕು. ಅವರಲ್ಲಿ ಮೂವತ್ತರಿಂದ ಐವತ್ತು ವರ್ಷದವರೆಗೆ ವಯಸ್ಸಾದವರು ಹಾಗೂ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾದವರನ್ನು ಗೋತ್ರಕುಟುಂಬದ ಪ್ರಕಾರ ಎಣಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಗೇರ್ಷೋನನ ಪುತ್ರರ ಲೆಕ್ಕವನ್ನು ಸಹ ಅವರ ತಂದೆಗಳ ಮನೆಗಳ ಪ್ರಕಾರವಾಗಿಯೂ, ಅವರ ಕುಲಗಳ ಪ್ರಕಾರವಾಗಿಯೂ ತೆಗೆದುಕೊಳ್ಳಬೇಕು.