Numbers 4:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಂಗಳದ ಪರದೆಗಳನ್ನು, ಪವಿತ್ರ ಗುಡಾರವನ್ನು ಮತ್ತು ವೇದಿಕೆಯ ಸುತ್ತಲೂ ಇರುವ ಅಂಗಳ ಪ್ರವೇಶದ್ವಾರದ ಪರದೆಯನ್ನು, ಅವುಗಳ ಹಗ್ಗಗಳನ್ನು ಮತ್ತು ಇವುಗಳ ಎಲ್ಲಾ ಉಪಕರಣಗಳನ್ನು ವರ್ಗಾಯಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವದರ್ಶನದ ಗುಡಾರದ ಬಾಗಿಲಿನ ಪರದೆ, ಗುಡಾರದ ಮತ್ತು ಯಜ್ಞವೇದಿಯ ಸುತ್ತಣ ಅಂಗಳದ ತೆರೆಗಳು, ಅದರ ಬಾಗಿಲಿನ ಪರದೆಗಳು, ಹಗ್ಗಗಳು, ಎಲ್ಲಾ ಉಪಕರಣಗಳು ಇವುಗಳನ್ನು ಹೊರಬೇಕು ಮತ್ತು ಇವುಗಳಿಗೆ ಸಂಬಂಧಪಟ್ಟ ಎಲ್ಲಾ ಕೆಲಸವನ್ನು ಅವರು ಮಾಡಬೇಕು.
Kannada BSI Bible 2016
ಅಂಗಳದ ಪರದೆಗಳನ್ನೂ ಗುಡಾರವನ್ನೂ ಬಲಿಪೀಠವನ್ನೂ ಇವುಗಳ ಸುತ್ತಲಿರುವ ಅಂಗಳದ ಬಾಗಲಿನ ತೆರೆಯನ್ನೂ ಅವುಗಳ ಹಗ್ಗಗ ಳನ್ನೂ ಅವುಗಳ ಸೇವೆಯ ಎಲ್ಲಾ ವಸ್ತುಗಳನ್ನೂ ಹೊತ್ತು ಕೊಳ್ಳಬೇಕು. ಅವುಗಳಿಗೆ ಮಾಡತಕ್ಕ ಎಲ್ಲಾ ಸೇವೆಯನ್ನು ಹೀಗೆ ಅವರು ಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವದರ್ಶನದ ಗುಡಾರದ ಬಾಗಲಿನ ಪರದೆಯು, ಗುಡಾರದ ಮತ್ತು ಯಜ್ಞವೇದಿಯ ಸುತ್ತಣ ಅಂಗಳದ ತೆರೆಗಳು, ಅದರ ಬಾಗಲಿನ ಪರದೆಯು, ಹಗ್ಗಗಳು, ಎಲ್ಲಾ ಉಪಕರಣಗಳು ಇವುಗಳನ್ನು ಹೊರಬೇಕು; ಮತ್ತು ಇವುಗಳಿಗೆ ಸಂಬಂಧಪಟ್ಟ ಎಲ್ಲಾ ಕೆಲಸವನ್ನು ಅವರು ಮಾಡಬೇಕು.
Kannada Bible (KNCL) BSI 2016
ಗುಡಾರದ ಮತ್ತು ಬಲಿಪೀಠದ ಸುತ್ತಣ ಅಂಗಳದ ತೆರೆಗಳು, ಅದರ ಬಾಗಿಲಿನ ಪರದೆ, ಹಗ್ಗಗಳು ಮತ್ತು ಅವುಗಳ ಎಲ್ಲ ಉಪಕರಣಗಳು, ಇವುಗಳನ್ನು ಹೊರಬೇಕು; ಮತ್ತು ಇವುಗಳಿಗೆ ಸಂಬಂಧಪಟ್ಟ ಎಲ್ಲ ಕೆಲಸಗಳನ್ನು ಅವರೇ ಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂಗಳದ ಪರದೆಗಳನ್ನೂ ಗುಡಾರವನ್ನೂ ಬಲಿಪೀಠವನ್ನೂ ಇವುಗಳ ಸುತ್ತಲಿರುವ ಅಂಗಳದ ಬಾಗಿಲಿನ ಪರದೆಯನ್ನೂ ಅವುಗಳ ಹಗ್ಗಗಳನ್ನೂ, ಅವುಗಳ ಸೇವೆಯ ಎಲ್ಲಾ ಸಲಕರಣೆಗಳನ್ನೂ ಹೊತ್ತುಕೊಳ್ಳಬೇಕು. ಅವುಗಳಿಗೆ ಮಾಡತಕ್ಕ ಎಲ್ಲಾ ಸೇವೆಯನ್ನು ಹೀಗೆ ಅವರು ಮಾಡಬೇಕು.